ರಾಜಕೀಯಕ್ಕೆ ಗುಡ್ ಬೈ ಹೇಳಿದ ಹಳ್ಳಿಹಕ್ಕಿ! – ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಹೆಚ್ ವಿಶ್ವನಾಥ್!

ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಉದ್ಯಮಿ ಮನೆಗೆ ಇಡಿ ಮಿಂಚಿನ ದಾಳಿ! – ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ 9ನೇ ಮಹಡಿಯಿಂದ ಹಣದ ಬ್ಯಾಗ್ ಎಸೆದ ವ್ಯಕ್ತಿ!
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ವಿಶ್ವನಾಥ್, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು. ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು.
ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.

ನೋಡಿರಿ

