ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದ ಡಿಕೆಶಿ – ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ

ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದ ಡಿಕೆಶಿ – ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ

ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಅವರು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇದನ್ನೂ ಓದಿ:ತಮಿಳುನಾಡಲ್ಲಿ ಸರ್ಕಾರ ರಚನೆಗೆ ದಳಪತಿ ವಿಜಯ್ ಕಸರತ್ತು –  ಸೆಲೆಬ್ರಿಟಿಗಳ ರಾಜಕೀಯ ದರ್ಬಾರ್  ಹೇಗಿದೆ?

ಸಚಿವ ಡಿ ಸುಧಾಕರ್ ನಿಧನದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸಚಿವ ಡಿ ಸುಧಾಕರ್​ ಅವರು ಚಿತ್ರದುರ್ಗದ ಹಿರಿಯೂರಿನ ಶಾಸಕರಾಗಿದ್ದಾರೆ. ಜೊತೆ ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ರು. ಹಿರಿಯೂರ ಧ್ವನಿಯಾಗಿದ್ದ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಸಚಿವರ ನಿಧನಕ್ಕೆ ಗಣ್ಯರು ಸಂತಾಪ  ಸೂಚಿಸಿದ್ದಾರೆ. ಸಚಿವ ಡಿ ಸುಧಾಕರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದ  ಬಳಲುತ್ತಿದ್ದರು. ಇತ್ತೀಚೆಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಚಿವರಿಗೆ ಶಾಸ್ವಕೋಶದ ಸೋಂಕು ಕಾಣಿಸಿಕೊಂಡಿತ್ತು. ಇದ್ರಿಂದಾಗಿ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ಚಿಕಿತ್ಸೆ ಫಲಕಾರಿಯಾಗಿ ಭಾನುವಾರ ಮುಂಜಾನೆ ನಿಧನರಾದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಡಿ. ಸುಧಾಕರ್​​ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ನೇಹಿತನಿಗೆ ಅಂತಿಮ ನಮನ ಸಲ್ಲಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದುರ. ಸ್ನೇಹಿತನ ಪಾರ್ಥಿವ ಶರೀರ ನೋಡುತ್ತಿದ್ದಂತೆ ದುಃಖ ತಡೆದುಕೊಳ್ಳಲಾಗದೆ ಡಿಕೆಶಿ ಕಣ್ಣೀರು ಹಾಕಿದ್ದಾರೆ. ಬಳಿಕ ಡಿ.ಸುಧಾಕರ್ ಪುತ್ರ ಸುಹಾಸ್ ಬೆನ್ನುತಟ್ಟಿ ಸಾಂತ್ವನ ಹೇಳಿದರು. ಡಿಕೆಶಿ ನೋಡುತ್ತಿದ್ದಂತೆ ಡಿ.ಸುಧಾಕರ್ ಪುತ್ರ ಸುಹಾಸ್ ಕೂಡ ಭಾವುಕರಾದರು.

Sulekha

Leave a Reply

Your email address will not be published. Required fields are marked *