ತಮಿಳುನಾಡು ಹೊಸ ಸಿಎಂಗೆ ಕರ್ನಾಟಕದ ಮುಖ್ಯಮಂತ್ರಿ ವಿಶ್! – ನೀವು ಇತಿಹಾಸ ಸೃಷ್ಟಿಸಿದ್ದೀರಿ ಎಂದ ಸಿದ್ದರಾಮಯ್ಯ!

ಕಳೆದ ಆರು ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ಆಧಿಪತ್ಯವಿದ್ದ ತಮಿಳುನಾಡಿನಲ್ಲಿ ಮೊದಲ ಬಾರಿಗೆ TVK ಪಕ್ಷ ಗೆದ್ದು ಇತಿಹಾಸ ನಿರ್ಮಿಸಿದೆ. ನಿನ್ನೆ ದಳಪತಿ ವಿಜಯ್ ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ದಳಪತಿ ವಿಜಯ್‌ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ತಮ್ಮ ಪ್ರೀತಿಸಿ ಓಡಿಹೋಗಿದ್ದಕ್ಕೆ ಅಣ್ಣನಿಗೆ ಶಿಕ್ಷೆ! – ಅರ್ಚಕನ ಕಿಡ್ನ್ಯಾಪ್ ಮಾಡಿ ಥಳಿಸಿದ ಯುವತಿ ಮನೆಯವರು!
ಚೊಚ್ಚಲ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ 108 ಸ್ಥಾನಗಳನ್ನು ಪಡೆದುಕೊಂಡಿತ್ತು. ಬಳಿಕ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳ ಬೆಂಬಲದೊಂದಿಗೆ ಬಹುಮತ ಸಾಬೀತುಪಡಿಸಿ, ಭಾನುವಾರ (ಮೇ 10) ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಜಯ್ ಸಿಎಂ ಆಗಿ ಗದ್ದುಗೆ ಏರಿದ್ದಾರೆ. ಈ ಬೆನ್ನಲ್ಲೇ ವಿಜಯ್‌ಗೆ ಕರೆ ಮಾಡಿ ಸಿದ್ದರಾಮಯ್ಯ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ನಾನು ಸಿದ್ದರಾಮಯ್ಯ ಮಾತಾಡ್ತಿದ್ದೀನಿ. ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು. ಬೆಂಗಳೂರಿಗೆ ಬಂದಾಗ ಇಬ್ಬರು ಭೇಟಿಯಾಗೋಣ ಎಂದು ಹೇಳಿದ್ದಾರೆ.
ಇನ್ನು ಎಕ್ಸ್‌ನಲ್ಲಿಯೂ ಶುಭಾಶಯ ತಿಳಿಸಿ ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಶೀ ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಕರ್ನಾಟಕ ಮತ್ತು ತಮಿಳುನಾಡು ನಡುವೆ ಜನರ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ. ತಮಿಳುನಾಡಿನ ಜನರ ಸೇವೆಯಲ್ಲಿ ಯಶಸ್ವಿ ಮತ್ತು ಪರಿವರ್ತನಾತ್ಮಕ ಆಡಳಿತ ನೀಡಲು ಶುಭಾಶಯ ತಿಳಿಸಿದ್ದಾರೆ.

ನೋಡಿರಿ

