ಪೀತಿಸಿದವನ ಜೊತೆ ಮದುವೆಯಾಗಲು ಮನೆಯವರಿಂದ ಅಡ್ಡಿ! – ಮನನೊಂದ ಯುವತಿ ದುರಂತ ಅಂತ್ಯ!

ಪ್ರೀತಿ ಕುರುಡು.. ಪ್ರೇಮಕ್ಕೆ ಕಣ್ಣಿಲ್ಲ ಎಂಬ ಮಾತಿದೆ. ಪ್ರೀತಿಸಿದವರಿಗಾಗಿ ಏನು ಬೇಕಾದ್ರೂ ಮಾಡೋಕೆ ರೆಡಿ ಇರುತ್ತಾರೆ. ಇದೀಗ ಇಲ್ಲೊಂದು ಕಡೆ ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.
ಇದನ್ನೂ ಓದಿ: ತಮ್ಮ ಪ್ರೀತಿಸಿ ಓಡಿಹೋಗಿದ್ದಕ್ಕೆ ಅಣ್ಣನಿಗೆ ಶಿಕ್ಷೆ! – ಅರ್ಚಕನ ಕಿಡ್ನ್ಯಾಪ್ ಮಾಡಿ ಥಳಿಸಿದ ಯುವತಿ ಮನೆಯವರು!
ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೋಡಿರಿ

