ಎಣ್ಣೆ ಪ್ರಿಯರಿಗೆ ಬಿಗ್‌ಶಾಕ್! – 21 ವರ್ಷ ತುಂಬಿದ್ರಷ್ಟೇ ಮದ್ಯ ಖರೀದಿಗೆ ಅವಕಾಶ!

ತಮಿಳುನಾಡಿನಲ್ಲಿ ದಳಪತಿ ದರ್ಬಾರ್ ಶುರುವಾಗಿದೆ. ದಳಪತಿ ವಿಜಯ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಜನಪರ ಕಾರ್ಯಗಳನ್ನ ಮಾಡುತ್ತಿದ್ದಾರೆ. ಇದೀಗ ವಿಜಯ್ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದಾರೆ. ತಮಿಳುನಾಡಿನಲ್ಲಿ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ! – ರಾಹುಲ್ ಗಾಂಧಿ ಆಪ್ತನಿಗೆ ಬಿಗ್‌ಶಾಕ್!
ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಮೊನ್ನೆಯಷ್ಟೇ ಶಾಲಾ- ಕಾಲೇಜು, ಧಾರ್ಮಿಕ ಕ್ಷೇತ್ರಗಳ ಬಳಿ ಇರುವ 717 ಮದ್ಯದ ಅಂಗಡಿಗಳನ್ನ ಬಂದ್ ಮಾಡಿಸಲಾಗಿತ್ತು. ಅಲ್ಲದೇ ಈ ಪ್ರದೇಶಗಳಲ್ಲಿ ತಂಬಾಕು ಮಾರಾಟ ನಿಷೇಧಿಸಲಾಗಿತ್ತು. ಇದೀಗ ವಿಜಯ್ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ತಮಿಳುನಾಡಿನಲ್ಲಿ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ಅಂಗಡಿಗಳ ಸಿಬ್ಬಂದಿಗೆ ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ. ಅನುಮಾನ ಬಂದಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದೇ ವೇಳೆ ಮದ್ಯದಂಗಡಿಗಳ ಕಾರ್ಯಾಚರಣೆ ಸಮಯವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚುವ ಪ್ರಸ್ತಾಪವೂ ಚರ್ಚೆಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಟಿಎಎಸ್‌ಎಮ್‌ಎಸಿ ರಾಜ್ಯದ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಿದೆ. 2025ರಲ್ಲಿ 48,344 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ದಾಖಲಾಗಿದ್ದು, ಇದು ರಾಜ್ಯದ ಅತೀ ಹೆಚ್ಚು ಆದಾಯ ತರುವ ಇಲಾಖೆಗಳಲ್ಲೊಂದು. ಸರ್ಕಾರದ ಆದೇಶದಂತೆ ದೇವಾಲಯಗಳ ಬಳಿ ಇರುವ 276 ಅಂಗಡಿಗಳು, ಶಿಕ್ಷಣ ಸಂಸ್ಥೆಗಳ ಬಳಿ ಇರುವ 186 ಅಂಗಡಿಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದ 255 ಅಂಗಡಿಗಳನ್ನು ಮುಂದಿನ ಎರಡು ವಾರಗಳಲ್ಲಿ ಮುಚ್ಚಲಾಗುತ್ತದೆ. ಇದರಿಂದ ರಾಜ್ಯದ ಒಟ್ಟು ಟಿಎಎಸ್‌ಎಮ್‌ಎಸಿ ಅಂಗಡಿಗಳ ಸಂಖ್ಯೆ 4,048ಕ್ಕೆ ಇಳಿಯಲಿದೆ.
ಸಾರ್ವಜನಿಕ ಆರೋಗ್ಯ ಮತ್ತು ಯುವಜನರಲ್ಲಿ ಮಾದಕ ವ್ಯಸನ ತಡೆಯುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಜಯ್ ಅವರ ಪಕ್ಷ ಟಿವಿಕೆ ಚುನಾವಣಾ ಪ್ರಣಾಳಿಕೆಯಲ್ಲಿ ಮಾದಕ ವಸ್ತು ಮುಕ್ತ ತಮಿಳುನಾಡು ನಿರ್ಮಿಸುವ ಭರವಸೆ ನೀಡಿತ್ತು.

ನೋಡಿರಿ

