ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

ಉಪಚುನಾವಣೆಯಲ್ಲಿ ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರು ಗೆದ್ದಿದ್ದರು. ಇಂದು ಕಾಂಗ್ರೆಸ್‌ನ ಇಬ್ಬರು ಶಾಸಕರು  ಅಧಿಕೃತವಾಗಿ ಪದಗ್ರಹಣ ಮಾಡಿದರು.

ಇದನ್ನೂ ಓದಿ: ಗುಂಡಮ್ಮಗೆ ಮಾದಪ್ಪನ ರಕ್ಷೆ.. ಆಪರೇಷನ್‌ ಪಿಂಕಿ ಸಕ್ಸಸ್? – ಶಿವು ಖೆಡ್ಡಾದಲ್ಲಿ ಅಮ್ಮ – ಮಗ!

ಉಮೇಶ್‌ ಮೇಟಿ ಹಾಗೂ ಸಮರ್ಥ್‌ ಶಾಮನೂರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಕಾಂಗ್ರೆಸ್‌ ಶಾಸಕರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.  ಸಮರ್ಥ್​, ಮೃತ ತಮ್ಮ ಅಜ್ಜ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಗಮನಸೆಳೆದಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಸಭಾಧ್ಯಕ್ಷರು ಶುಭ ಕೋರಿದರು.

ಇನ್ನು ಈ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯ ರಾಜಕಾರಣದ ಹಲವು ಗಣ್ಯರು ಭಾಗವಹಿಸಿದ್ದರು. ವೇದಿಕೆಯ ಮೇಲೆ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು. ಇನ್ನು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಶಾಸಕರು ಸದನದ ಕಾರ್ಯಕಲಾಪಗಳಲ್ಲಿ ಭಾಗವಹಿಸಲು ಅಧಿಕೃತವಾಗಿ ಅರ್ಹತೆ ಪಡೆದರು. ನೂತನ ಶಾಸಕರ ಬೆಂಬಲಿಗರು ಹಾಗೂ ಕುಟುಂಬಸ್ಥರು ಈ ಸಂದರ್ಭದಲ್ಲಿ ಸಂಭ್ರಮ ವ್ಯಕ್ತಪಡಿಸಿದರು.

Shwetha M

Leave a Reply

Your email address will not be published. Required fields are marked *