ದೇಶದ ಜನರಿಗೆ ಬೆಲೆ ಏರಿಕೆ ಶಾಕ್! – ಪೆಟ್ರೋಲ್, ಡೀಸೆಲ್ CNG ದರ ಹೆಚ್ಚಳ!

ದೇಶದ ಜನರಿಗೆ ಶಾಕಿಂಗ್ ಸುದ್ದಿಯಿದೆ. ಇದೀಗ ಪೆಟ್ರೋಲ್, ಡೀಸೆಲ್ ಹಾಗೂ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ಏರಿಕೆಯಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳವಾಗಿದೆ.
ಇದನ್ನೂ ಓದಿ: ನಾಯಕತ್ವದಲ್ಲಿ ಗೆದ್ದು ಬೀಗಿದ ಬುಮ್ರಾ – ಮುಂಬೈ ವಿರುದ್ಧ ಸೋತು ಬೆಂಡಾದ ಪಂಜಾಬ್ ಕಿಂಗ್ಸ್
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ (Crude Oil) ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್ ದರ 106.17 ರೂ. ಏರಿಕೆಯಾದರೆ ಡಿಸೇಲ್ ದರ 94.10 ರೂ. ತಲುಪಿದೆ.
ಇನ್ನು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ 1 ಕೆಜಿ ಸಿಎನ್ಜಿ ದರ 93 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 30 ಪೈಸೆಯಿಂದ 1 ರೂ. ರವರೆಗೆ ವ್ಯತ್ಯಾಸ ಇರಲಿದೆ. ಆಟೋರಿಕ್ಷಾಗಳು, ಕ್ಯಾಬ್ಗಳು ವೆಚ್ಚ ಕಡಿಮೆ ಮಾಡಲು ಸಿಎನ್ಜಿ ಬಳಸುತ್ತವೆ. ಸಣ್ಣ ಲಾರಿಗಳು, ಟೆಂಪೋಗಳು ಮತ್ತು ಡೆಲಿವರಿ ವ್ಯಾನ್ಗಳು ಸಿಎನ್ಜಿ ಇಂಧನ ಬಳಸುತ್ತವೆ. ಸಿಎನ್ಜಿ ದರ ಏರಿಕೆಯಿಂದ ಈ ವಾಹನಗಳ ಬಾಡಿಗೆ ಏರಿಕೆಯಾಗಲಿದೆ.

ನೋಡಿರಿ

