ದರ್ಶನ್ಗೆ ಒಂದು ವರ್ಷ ಬೇಲ್ ಇಲ್ಲ – ಒಂದು ವರ್ಷದೊಳಗೆ ವಿಚಾರಣೆ ಮುಗಿಸಲು ಕೆಳ ನ್ಯಾಯಾಲಯಕ್ಕೆ ಸೂಚನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಒಂದು ವರ್ಷ ಬೇಲ್ ಸಿಗೋದಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸ್ಯಾಂಡಲ್ವುಡ್ ನಟ ದರ್ಶನ್ ಗೆ ಇದು ಮತ್ತೊಂದು ಹಿನ್ನಡೆಯಾಗಿದೆ.
ಇದನ್ನೂ ಓದಿ:ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ಶೂಟಿಂಗ್ನಲ್ಲಿ ದುರಂತ – ಕಲಾ ವಿಭಾಗದ ಸಿಬ್ಬಂದಿ ಸಾವು
ಕಳೆದ 8 ತಿಂಗಳುಗಳಿಂದ ಜೈಲುವಾಸ ಅನುಭವಿಸುತ್ತಿರುವ ದರ್ಶನ್, ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ತೀವ್ರ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ದರ್ಶನ್ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ – ವಿವಾದಗಳನ್ನು ಆಲಿಸಿ ಮಹತ್ವದ ತೀರ್ಪು ನೀಡಿದೆ. ಮಹತ್ವದ ತೀರ್ಪು ನೀಡುವ ವೇಳೆ ಸುಪ್ರೀಂ ಕೋರ್ಟ್, ‘ಒಂದು ವರ್ಷ ಸಮಯಾವಕಾಶ ನೀಡ್ತೀವಿ, ಆ ನಿಗದಿತ ಸಮಯದ ಒಳಗೆ ವಿಚಾರಣೆ ಪೂರ್ಣಗೊಳಿಸದಿದ್ದರೆ ಜಾಮೀನು ನೀಡುತ್ತೀವಿ. ಸಾಕ್ಷಿಗಳನ್ನು ಮತ್ತೆ ಮತ್ತೆ ವಿಚಾರಣೆ ನಡೆಸೋದು ಬೇಡ’ ಎಂದು ಸುಪ್ರೀಂ ಹೇಳಿದೆ. ಆ ಮೂಲಕ ಸದ್ಯಕ್ಕೆ ನಟ ದರ್ಶನ್ ಅವರಿಗೆ ನ್ಯಾಯಮೂರ್ತಿ ಪರ್ದೀವಾಲಾ ಅವರಿದ್ದ ಪೀಠ ಜಾಮೀನು ನಿರಾಕರಿಸಿ ಮಹತ್ವದ ತೀರ್ಪು ನೀಡಿದ್ದಾರೆ.

ನೋಡಿರಿ

