ಕೇಂದ್ರ ಬಜೆಟ್ ಅಧಿವೇಶನ ಆರಂಭ – ಈ ಬಾರಿಯ ನಿರೀಕ್ಷೆಗಳೇನು?

ಕೇಂದ್ರ ಬಜೆಟ್ ಅಧಿವೇಶನ ಆರಂಭ – ಈ ಬಾರಿಯ ನಿರೀಕ್ಷೆಗಳೇನು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಜೆಟ್ ಅಧಿವೇಶನ ದೆಹಲಿಯ ಸಂಸತ್ ಭವನದಲ್ಲಿಇಂದಿನಿಂದ ಆರಂಭವಾಗಿದೆ. ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಚೊಚ್ಚಲ ಭಾಷಣ ಮಾಡಿದ್ದಾರೆ.

ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಅರ್ಥಪೂರ್ಣ ಅಧಿವೇಶನಕ್ಕೆ ಅವಕಾಶ ನೀಡಬೇಕು. ಈ ಬಾರಿ ಜನರ ಅಪೇಕ್ಷೆಯಂತೆ ಬಜೆಟ್​ ಮಂಡನೆ ಆಗಲಿದೆ. ಎಲ್ಲಾ ಸಂಸದರೂ ಜನಪರ ವಿಚಾರಕ್ಕೆ ಆದ್ಯತೆ ನೀಡಬೇಕು. ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳ ಸಹಕಾರ ಕೋರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಕುಂಠಿತ! – ಎಕನಾಮಿಕ್ ಸರ್ವೆ ಏನ್ ಹೇಳುತ್ತೆ?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮೋದಿ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಜನಪ್ರಿಯ ಬಜೆಟ್ ಮಂಡನೆಯ ಸಾಧ್ಯತೆ ದಟ್ಟವಾಗಿದೆ. ನೌಕರರು ಮತ್ತು ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳನ್ನು ಸೀತಾರಾಮನ್ ಘೋಷಿಸುವ ನಿರೀಕ್ಷೆಯಿದೆ. ಇದರ ಜೊತೆಗೆ ಜನರ ನಿರೀಕ್ಷೆಗಳು ಸಹ ಹೆಚ್ಚಾಗಿದೆ.

ಬಜೆಟ್‌ ಅಧಿವೇಶನದ ಹಿನ್ನೆಲೆ ಸೋಮವಾರ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿತ್ತು. ಆಮ್‌ ಆದ್ಮಿ ಪಕ್ಷ, ಡಿಎಂಕೆ, ಎಡಪಕ್ಷಗಳು, ಆರ್‌ಜೆಡಿ, ಜೆಡಿಯು, ಟಿಆರ್‌ಎಸ್‌, ಟಿಎಂಸಿ, ಬಿಜೆಡಿ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು ಭಾಗವಹಿಸಿದ್ದವು. ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಯಾತ್ರೆಯ ಸಮಾರೋಪಕ್ಕೆ ತೆರಳಿದ್ದ ಕಾಂಗ್ರೆಸ್‌ ನಾಯಕರು ಸರ್ವಪಕ್ಷ ಸಭೆಗೆ ಗೈರಾಗಿದ್ದರು. ಫೆ.14ಕ್ಕೆ ಅಧಿವೇಶನ ಮುಕ್ತಾಯವಾಗಲಿದ್ದು, ಮಾ.12ರಿಂದ ಬಜೆಟ್‌ ಅಧಿವೇಶನದ ಚರ್ಚೆಯ ಎರಡನೆಯ ಕಂತು ಆರಂಭವಾಗಲಿದೆ.

suddiyaana