ಮೈಸೂರು ರಸ್ತೆಯಲ್ಲಿ ಪ್ರಯಾಣ ಮಾಡುವವರಿಗೆ ಸಂಡೇ ಶಾಕ್ – ಇವತ್ತು ಬೆಳಗ್ಗೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ಇವತ್ತಿನ ಭಾನುವಾರ ಕೂಡಾ ಮೆಟ್ರೋ ಪ್ರಯಾಣಿಕರು ಮನೆಯಿಂದ ಹೊರಡುವ ಮೊದಲು ಪ್ಲಾನ್ ಮಾಡಿಕೊಳ್ಳಲೇಬೇಕು. ಯಾಕೆಂದರೆ, ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ.
ಇದನ್ನೂ ಓದಿ:ಪೆಟ್ರೋಲ್, ಡೀಸೆಲ್ ಆಯ್ತು.. ಈಗ ಖಾಸಗಿ ಬಸ್ ದರ ಏರಿಕೆ! – ಶೇ.20-30ರಷ್ಟು ಟಿಕೆಟ್ ದರ ಹೆಚ್ಚಳ!
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಯಾಣಿಸುವ ಬೆಂಗಳೂರಿಗರು ಈ ಸುದ್ದಿ ಗಮನಿಸಲೇಬೇಕು. ಅಗತ್ಯ ನಿರ್ವಹಣಾ ಕಾಮಗಾರಿಗಳಿಂದಾಗಿ ಮೇ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ.
ಚಲ್ಲಘಟ್ಟ – ವಿಜಯನಗರ ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್ ಆರ್.ವಿ. ರಸ್ತೆ – ಬೊಮ್ಮಸಂದ್ರ ಭಾನುವಾರ ಬೆಳಗ್ಗೆ 09 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ನೋಡಿರಿ

