ಕಿಲ್ಲರ್‌ ಕಲ್ಲಂಗಡಿಗೆ ಮತ್ತೊಂದು ಬಲಿ! – ಕಲ್ಲಂಗಡಿ ಹಣ್ಣು ಸೇವಿಸಿ ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಕಿಲ್ಲರ್‌ ಕಲ್ಲಂಗಡಿಗೆ ಮತ್ತೊಂದು ಬಲಿ! – ಕಲ್ಲಂಗಡಿ ಹಣ್ಣು ಸೇವಿಸಿ ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಬೇಸಿಗೆಗಾಲದಲ್ಲಿ ಕಲ್ಲಂಗಡಿ ತಿನ್ನುವುದು ಸಾಮಾನ್ಯ. ನಿರ್ಜಲೀಕರಣ ಸಮಸ್ಯೆಯಿಂದ ಪಾರಾಗಲು ಅನೇಕರು ಕಲ್ಲಂಗಡಿ ಹಣ್ಣು ಸೇವಿಸುತ್ತಾರೆ. ಆದ್ರೆ ಇತ್ತೀಚೆಗೆ ದೇಶದಲ್ಲಿ ಕಲ್ಲಂಗಡಿ ಹಣ್ಣು ತಿಂದ ಬಳಿಕ ಜನ ಅಸ್ವಸ್ಥರಾಗುತ್ತಿರುವ ಪ್ರಕರಣ ವರದಿಯಾಗುತ್ತಿದೆ. ಇದೀಗ ಮತ್ತೊಬ್ಬ ವ್ಯಕ್ತಿ ಕಲ್ಲಂಗಡಿ ತಿಂದು ಮೃತಪಟ್ಟಿದ್ದು, ಮತ್ತೊಬ್ಬರು ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಾಧುಗಳ ವೇಷದಲ್ಲಿ ಕಳ್ಳರ ಕೈಚಳಕ! – ಆಶೀರ್ವಾದ ಪಡೆಯಲು ಹೋದ್ರೆ ಮಾಯವಾಗುತ್ತೆ ಮೈಮೇಲಿದ್ದ ಚಿನ್ನ!

ಈ ಬೆಚ್ಚಿಬೀಳಿಸುವ ಘಟನೆ ಮಧ್ಯಪ್ರದೇಶದ ಶಿಯೋಪುರದಲ್ಲಿ ನಡೆದಿದೆ. ತಂದೆ ಇಂದ್ರ ಕುಮಾರ್ ಪರಿಹಾರ್ (43) ಮೃತಪಟ್ಟಿದ್ದು, ಮಗ ವಿನೋದ್ (21) ಅಸ್ವಸ್ಥಗೊಂಡಿದ್ದು, ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಶಿಯೋಪುರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಇಂದ್ರ ಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತಂದೆ, ಮಗ ಗುರುವಾರ ರಾತ್ರಿ ಕಲ್ಲಂಗಡಿ ಸೇವಿಸಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರ ಕುಮಾರ್ ಅವರು ಸಾವನ್ನಪ್ಪಿದ್ದರೆ, ವಿನೋದ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ಇನ್ನು ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಆರ್.ಬಿ. ಗೋಯಲ್, ಇಂದ್ರ ಕುಮಾರ್ ಮತ್ತು ವಿನೋದ್ ಅವರನ್ನು ಗಂಭೀರ ಸ್ಥಿತಿಯಲ್ಲಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಲ್ಲಂಗಡಿ ಸೇವನೆಯಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎನ್ನುವುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ರೋಗಿಗಳು ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದಿರಬಹುದು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆಯೇ ನಿಖರವಾದ ಕಾರಣವನ್ನು ನಿರ್ಧರಿಸಬಹುದು ಎಂದು ತಿಳಿಸಿದ್ದಾರೆ.

Shwetha M

Leave a Reply

Your email address will not be published. Required fields are marked *