ಸಾರಿಗೆ ನೌಕರರಿಗೆ ಶಾಕ್ ಕೊಟ್ಟ ಸರ್ಕಾರ! – ಮೇ 20ರಂದು ಮುಷ್ಕರ ನಡೆಸಿದ್ರೆ ಸಂಬಳ ಕಟ್!

ಸರ್ಕಾರದ ವೇತನ ಪರಿಷ್ಕರಣೆ, ಹಿಂಬಾಕಿ ಬಿಡುಗಡೆ ನಿರ್ಧಾರ ಒಪ್ಪದೇ, ತಮ್ಮ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಮೇ 20ರಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದೆ. ಆದ್ರೀಗ ಪ್ರತಿಭಟನೆಗೆ ಮುಂದಾಗಿದ್ದ ನೌಕರರಿಗೆ ಕೆಎಸ್ಆರ್ಟಿಸಿ ಶಾಕ್ ಕೊಟ್ಟಿದೆ. ಯಾವುದೇ ಮುಷ್ಕರ ನಡೆಸುವಂತಿಲ್ಲ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಸುಪ್ರೀಂ ನಲ್ಲಿ ಬೇಲ್ ಸಿಗದೇ ಮೌನಕ್ಕೆ ಜಾರಿದ ದರ್ಶನ್ – ವಿಜಯಲಕ್ಷ್ಮಿ ಭಾವುಕ ಪೋಸ್ಟ್!
ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದರು. ಇದೀಗ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ಎಂಡಿ ಅಕ್ರಂಪಾಷಾ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಚ ಸೂಚನೆಗಳನ್ನು ಪಾಲಿಸದೇ ಮುಷ್ಕರದಲ್ಲಿ ಮೇ 20ರಂದು ಪಾಲ್ಗೊಂಡರೆ, ಸೇವೆಗೆ ಗೈರಾದರೆ ಅಂತಹ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ (ಕೆಲಸ ಮಾಡದಿದ್ದಾಗ ವೇತನವಿಲ್ಲ) ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶ ನೀಡಿದ್ದಾರೆ.
ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಮೇ 20ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಬೇಕು. ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು. ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ನೋ ವರ್ಕ್ ನೋ ಪೇ ಜಾರಿ ಮಾಡಿ. ಅನಿವಾರ್ಯ ಸಂದರ್ಭದಲ್ಲಿ ಅಥವಾ ಅವಶ್ಯವಿದ್ದಲ್ಲಿ, ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವಂತೆ ಅಕ್ರಂಪಾಷಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯವರು ಆಡಳಿತ ವರ್ಗಕ್ಕೆ ನೀಡಿರುವ ಮುಷ್ಕರದ ನೋಟಿಸ್ ಸಂಬಂಧಪಟ್ಟ ವಿವಾದವು ಸದ್ಯ ರಾಜ್ಯದ ಕಾರ್ಮಿಕ ಆಯುಕ್ತರ ಮುಂದೆ ರಾಜೀ ಸಂಧಾನದಲ್ಲಿದ್ದು, ಕೈಗಾರಿಕಾ ವಿವಾದಗಳ ಕಾಯಿದೆ-1947 ಮತ್ತು ನಿಯಮಗಳನ್ವಯ ‘ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ’ ಯ ನೌಕರರ ಮುಷ್ಕರದ ನೋಟಿಸ್ ಸಂಬಂಧಪಟ್ಟ ವಿವಾದವು ರಾಜಿ ಸಂಧಾನದಲ್ಲಿ ರುವಾಗ ನೌಕರರು ಮುಷ್ಕರ ಹೂಡುವಂತಿಲ್ಲ. ಹೀಗಾಗಿ ನಿಗಮದ ನೌಕರರು ಯಾವುದೇ ಕಾರಣಕ್ಕೂ ಉದ್ದೇಶಿತ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಬಾರದು. ಮತ್ತು ತಮ್ಮ ದೈನಂದಿನ ಕರ್ತವ್ಯಕ್ಕೆ ಅವಶ್ಯ ಹಾಜರಾಗಿ, ರಾಜ್ಯದ ಜನರ ಪ್ರೀತಿ ವಿಶ್ವಾಸಕ ಪಾತ್ರರಾಗಬೇಕಾಗಿ ಮನವಿ ಮಾಡಲಾಗಿದೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವುದಾಗಿಯೂ ಎಚ್ಚರಿಸಲಾಗಿದೆ.

ನೋಡಿರಿ

