ಅಯ್ಯಯ್ಯೋ.. ವೇದಿಕೆಯಲ್ಲೇ ಆ ಪದ ಬಳಸಿದ ನ್ಯಾಷನಲ್ ಕ್ರಶ್! – ** ಮಾತಿನ ಬೆನ್ನಲ್ಲೇ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದಾ ಸುದ್ದಿಯಲ್ಲಿರುವ ಬೆಡಗಿ. ಸಿನಿಮಾ ಮಾತ್ರವಲ್ಲದೇ ವಿವಾದಾತ್ಮಕ ಹೇಳಿಕೆ ವಿಚಾರವಾಗಿಯೂ ಸದ್ದು ಮಾಡುತ್ತಿರುತ್ತಾರೆ. ಇತ್ತೀಚೆಗಷ್ಟೇ ರಶ್ಮಿಕಾ ವಿಜಯ್ ದೇವರಕೊಂಡ ಅವರನ್ನು ಮದುವೆಯಾಗಿದ್ದರು. ಇದೀಗ ಕೊಡಗಿನ ಕುವರಿ ವೇದಿಕೆ ಮೇಲೆಯೇ ಕೆಟ್ಟ ಪದ ಬಳಸಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರಿಗೆ ಶಾಕ್ ಕೊಟ್ಟ ಸರ್ಕಾರ! – ಮೇ 20ರಂದು ಮುಷ್ಕರ ನಡೆಸಿದ್ರೆ ಸಂಬಳ ಕಟ್!
ಮದುವೆ ಆದ ಬಳಿಕ ರಶ್ಮಿಕಾ ನಟನೆಯ ಮೊದಲ ಕಾಕ್‌ಟೇಲ್ 2 ಸಿನಿಮಾ ತೆರೆಗೆ ಬರುತ್ತಿದೆ. ಜೂನ್ 19ರಂದು ರಿಲೀಸ್ ಆಗಲಿರುವ ಈ ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಭಾನುವಾರ ರಾತ್ರಿ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಹನಟಿ ಕೃತಿ ಸನೂನ್ ಅವರ ಸೌಂದರ್ಯವನ್ನು ಹೊಗಳುವ ಬರದಲ್ಲಿ ರಶ್ಮಿಕಾ ವೇದಿಕೆಯಲ್ಲೇ ಬಾಯಿ ತಪ್ಪಿ ಇಂಗ್ಲಿಷ್‌ನ F ಪದ ಬಳಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ವೇದಿಕೆಯಲ್ಲಿ ರಶ್ಮಿಕಾ ಮಂದಣ್ಣ, ಶಾಹಿದ್ ಕಪೂರ್, ಕೃತಿ ಸನೂನ್ ಇದ್ದರು. ಕೃತಿ ಅವರನ್ನು ನೋಡಿ ಅತಿಯಾದ ಉತ್ಸಾಹದಲ್ಲಿದ್ದ ರಶ್ಮಿಕಾ ಮಾತನಾಡಿದರು. ಕಾಕ್‌ಟೇಲ್ 2 ಚಿತ್ರದಲ್ಲಿ ಏನೋ ಒಂದು ವಿಶೇಷತೆ ಇದೆ. ಕೃತಿ ನೀವು ತುಂಬಾ ಹಾಟ್ ಆಗಿ ಕಾಣಿಸುತ್ತಿದ್ದೀರಾ ಎಂಬುದು ಇಡೀ ಜಗತ್ತಿಗೇ ಗೊತ್ತು. ನೀವು ನಿಜಕ್ಕೂ F****** ಹಾಟ್ ಎಂದುಬಿಟ್ಟರು. ತಾವು ಆಡಿದ ಮಾತು ಅರಿವಿಗೆ ಬರುತ್ತಿದ್ದಂತೆ ಕೈಯಿಂದ ಬಾಯಿ ಮುಚ್ಚಿಕೊಂಡ ರಶ್ಮಿಕಾ, ನನ್ನನ್ನು ಕ್ಷಮಿಸಿ! ಆ ಪದವನ್ನು ಸೈಲೆನ್ಸ್ ಮಾಡಿಬಿಡಿ ಎಂದು ವಿನಂತಿಸಿಕೊಂಡರು.
ರಶ್ಮಿಕಾ ಅವರು ತಾವು ಆಡಿದ ಮಾತಿನಿಂದ ಸ್ವಲ್ಪ ಮುಜುಗರವನ್ನು ಎದುರಿಸಿದರು. ಇದನ್ನು ಕಂಡು ಅಲ್ಲಿದ್ದ ಪ್ರೇಕ್ಷಕರು ಮತ್ತು ಮಾಧ್ಯಮದವರು ಜೋರಾಗಿ ನಕ್ಕು, ಚಪ್ಪಾಳೆ ತಟ್ಟಿದರು. ನಂತರ ಸಿನಿಮಾ ಬಗ್ಗೆ ರಶ್ಮಿಕಾ ಮಾತನಾಡಿದರು. ನಾವೆಲ್ಲರೂ ಈ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದೇವೆ. ಇಡೀ ಸಿನಿಮಾದಲ್ಲಿ ಪ್ರತಿಯೊಂದು ದೃಶ್ಯವೂ ಮ್ಯಾಜಿಕಲ್ ಆಗಿ ಮೂಡಿಬಂದಿದೆ. ಈಗ ರಿಲೀಸ್ ಆಗಿರುವುದು ಕೇವಲ ಟ್ರೈಲರ್‌ನಂತಹ ತುಣುಕು ಅಷ್ಟೇ. ಮುಂದೆ ಚಿತ್ರದಲ್ಲಿ ನೋಡಲು ತುಂಬಾ ವಿಷಯಗಳಿವೆ ಎಂದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದರು.

ನೋಡಿರಿ

