ರಾಜ್ಯದಲ್ಲಿ ಸಾರಿಗೆ ಮುಷ್ಕರ ನಡೆಸುವಂತಿಲ್ಲ! – ಸಾರಿಗೆ ನೌಕರರಿಗೆ ಹೈಕೋರ್ಟ್ ಖಡಕ್ ಆದೇಶ

ಸಾರಿಗೆ ನೌಕರರು ಕರೆ ಕೊಟ್ಟ ಮುಷ್ಕರದ ಡೆಡ್ಲೈನ್ ಇಂದಿಗೆ ಅಂತ್ಯವಾಗುತ್ತಿದೆ. ವಿವಿಧ ಬೇಡಿಕರಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಸರ್ಕಾರಕ್ಕೆ ಸಂಜೆಯೊಳಗೆ ಡೆಡ್ಲೈನ್ ನೀಡಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಅಂದುಕೊಂಡಿರುವಾಗಲೇ KSRTC ನೌಕರರ ಸಂಘ ಮುಷ್ಕರದಿಂದ ಹೊರಬಂದಿತ್ತು. ಇದೀಗ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ.
ಇದನ್ನೂ ಓದಿ: ದೇಶದ ಜನರಿಗೆ ಬಿಗ್ಶಾಕ್! – – ಒಂದೇ ವಾರದಲ್ಲಿ 2ನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆ!
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಮೇ 20 ರಂದು (ನಾಳೆ) ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರುವ ಬಿಡುವಂತಾಗಿದೆ.
ಕಟ್ಟಡ ಕಾರ್ಮಿಕರು ಹಾಗೂ ಮನೆಕೆಲಸದ ಮಹಿಳೆ ಇಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುಷ್ಕರ ನಡೆಸದಂತೆ ಸೂಚಿಸಿದೆ. ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿ, ಗುರುವಾರಕ್ಕೆ (ಮೇ 21) ವಿಚಾರಣೆ ಮುಂದೂಡಿದೆ. ಸಾರಿಗೆ ನೌಕರರೊಂದಿಗೆ ಸಭೆ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ 12.5% ವೇತನ ಹೆಚ್ಚಳ ಮಾಡಿದೆ. ಮತ್ತೆ ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡದಂತೆ ಇಂದು ತಡೆಹಿಡಿಯುತ್ತೇವೆ. ಸರ್ಕಾರದ ಜೊತೆಗೆ ಮಾತುಕತೆ ನಡೆಸಿ, ಗುರುವಾರ ಮತ್ತೆ ವಿಚಾರಣೆ ನಡೆಸೋಣ ಎಂದು ಹೇಳಿದೆ.
ಇನ್ನೂ ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರ ವಾಪಸ್ ಪಡೆಯುವ ನಿರ್ಧಾರ ಮಾಡಿದೆ. ಇಂದು ಸಂಜೆ 4 ಗಂಟೆ ವೇಳೆಗೆ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಸಾರಿಗೆ ನೌಕರರ ಬೇಡಿಕೆಗಳೇನು?
- ಶೇ.25% ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗೆ ಸರ್ಕಾರ ಕೊಟ್ಟಿದ್ದು 12.5% ಮಾತ್ರ
- 2024ರ ಜನವರಿಯಿಂದ ಶೇ.25ರಷ್ಟು ವೇತನ ನೀಡಬೇಕು. ಬಾಕಿ ವೇತನ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗಬೇಕು
- 26 ತಿಂಗಳ ಬಾಕಿ ವೇತನ ಒಂದೇ ಕಂತಿನಲ್ಲಿ ಕೊಡಬೇಕು,ಭತ್ಯೆ ಹೆಚ್ಚಳ ಮಾಡಬೇಕು
- ಕೋವಿಡ್ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ
- ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸಲು 1 ತಿಂಗಳು ಗಡವು
- 26 ತಿಂಗಳ ಬಾಕಿ ಹಣ 1,272 ಕೋಟಿ ರಿಲೀಸ್ ಮಾಡಬೇಕು.

ನೋಡಿರಿ

