ಬೆಂಗಳೂರಿನ ಹೊಸ ಕ್ರಿಕೆಟ್ ಸ್ಟೇಡಿಯಂಗಿಂದು ಸಿಎಂ ಸಿದ್ದರಾಮಯ್ಯರಿಂದ ಶಿಲಾನ್ಯಾಸ

ಬೆಂಗಳೂರಿನ ಹೊಸ ಕ್ರಿಕೆಟ್ ಸ್ಟೇಡಿಯಂಗಿಂದು ಸಿಎಂ ಸಿದ್ದರಾಮಯ್ಯರಿಂದ ಶಿಲಾನ್ಯಾಸ

ರಾಜಧಾನಿ  ಬೆಂಗಳೂರಿನ  ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಳಿಕ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಸುಮಾರು 943 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ನೂತನ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರ 4ನೇ ಹಂತದಲ್ಲಿ (ಇಂಡ್ಲವಾಡಿ ಗ್ರಾಮ) ನಿರ್ಮಾಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ‘ಕೆಎಚ್‍ಬಿ ಸೂರ್ಯ ಕ್ರೀಡಾ ಗ್ರಾಮ’ ಯೋಜನೆಯಡಿ ಈ ಬೃಹತ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ: GT ಈಗ ಮೋಸ್ಟ್ ಡೇಂಜರಸ್ – ALL OUT ಮಂತ್ರ ಸಕ್ಸಸ್ ಆಗ್ತಿದ್ಯಾ?

ಆಧುನಿಕ ಸೌಲಭ್ಯಗಳು, ಹಾಸ್ಪಿಟಾಲಿಟಿ ಲೌಂಜ್‌ಗಳು, ವಿಐಪಿ ಬಾಕ್ಸ್‌ಗಳು ಹಾಗೂ ಮೀಡಿಯಾ ಸೌಲಭ್ಯಗಳನ್ನು ಒಳಗೊಂಡಂತೆ ಪ್ರೇಕ್ಷಕರ ಅನುಭವವನ್ನು ಉತ್ತಮಗೊಳಿಸುವ ವ್ಯವಸ್ಥೆಗಳು ಇರಲಿವೆ. ಜೊತೆಗೆ ಭಾರಿ ಜನಸ್ತೋಮ ನಿರ್ವಹಣೆಗೆ ಅಗತ್ಯವಾದ ಸುರಕ್ಷತಾ ವ್ಯವಸ್ಥೆಗಳನ್ನೂ ಈ ಕ್ರೀಡಾಂಗಣ ಹೊಂದಿರಲಿದೆ.

ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣವು ಕೇವಲ 32 ಸಾವಿರ ಆಸನ ಸಾಮರ್ಥ್ಯ ಹೊಂದಿದ್ದು, ಅಂತಾರಾಷ್ಟ್ರೀಯ ಪಂದ್ಯಗಳು ಹಾಗೂ IPL ಪಂದ್ಯಗಳಿಗೆ ಇದು ಸಾಕಾಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ನೂತನ ಕ್ರೀಡಾಂಗಣವನ್ನು ಬಹಳ ದೊಡ್ಡದಾಗಿ 75 ಏಕರೆ ಜಾಗದಲ್ಲಿ ನಿರ್ಮಿಸಲು ಯೋಜಿಲಾಗಿದ್ದು, ಸ್ಟೇಡಿಯಂನಲ್ಲಿ 80 ಸಾವಿರ ಜನರಿಗೆ ಆಸನ ವ್ಯವಸ್ಥೆ ಇರಲಿದೆ. ಆ ಮೂಲಕ ಇದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕಿಂತ ಎರಡು ಪಟ್ಟು ದೊಡ್ಡದಾಗಿರಲಿದೆ

Kishor KV

Leave a Reply

Your email address will not be published. Required fields are marked *