ಇನ್ಮುಂದೆ ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ, ಪ್ರಾಣಿ ಬಲಿ ಕೊಡುವಂತಿಲ್ಲ! – ಬಕ್ರೀದ್ ಹಬ್ಬಕ್ಕೆ ಹೊಸ ರೂಲ್ಸ್!

ಬಕ್ರೀದ್ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ದೇಶದಾದ್ಯಂತ ಮುಸ್ಲಿಂ ಬಾಂಧವರು ಹಬ್ಬ ಆಚರಣೆಗೆ ಸಿದ್ದತೆ ನಡೆಸುತ್ತಿದ್ದಾರೆ. ಈ ಹೊತ್ತಲ್ಲೇ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೊಸ ರೂಲ್ಸ್ ಜಾರಿಗೊಳಿಸಿದ್ದಾರೆ. ಈದ್ ಅಲ್-ಅಧಾ ದಿನದಂದು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ಅಥವಾ ‘ಕುರ್ಬಾನಿ’ (ಪ್ರಾಣಿ ಬಲಿ)ಗೆ ಅವಕಾಶ ನೀಡದಂತೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಜೊತೆಗೆ ಬಕ್ರೀದ್ ಹಬ್ಬಕ್ಕೆ ಸಂಬಂಧಿಸಿದಂತೆ 10 ಕಟ್ಟುನಿಟ್ಟಿನ ನಿರ್ದೇಶನಗಳನ್ನು ಹೊರಡಿಸಿದ್ದಾರೆ.
ಇದನ್ನೂ ಓದಿ: ಮುಂಬೈ ಸೋಲಿಗೆ ಸೆಖೆಯೇ ಕಾರಣ – ಸೋತಿದಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಸಮರ್ಥನೆ
ಮುಸ್ಲಿಂ ಬಾಂಧವರು ಹಬ್ಬ ಆಚರಣೆಗೆ ಸಿದ್ದತೆ ಮಾಡಿಕೊಂಡಿರುವಾಗಲೇ ಯುಪಿ ಸಿಎಂ ಯೋಗಿ ಸರ್ಕಾರ ಶಾಕ್ ಕೊಟ್ಟಿದೆ. ಹಬ್ಬದ ದಿನ ಮಸೀದಿ ಆವರಣದೊಳಗೆ ಮಾತ್ರ ನಮಾಜ್ ಮಾಡಬೇಕು. ತೆರೆದ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ರಸ್ತೆಗಳಲ್ಲಿ ಪ್ರಾರ್ಥನೆಗಳನ್ನು ನಡೆಸಬಾರದು. ಪ್ರಾರ್ಥನೆ ಸಲ್ಲಿಸಲು ರಸ್ತೆಗಳನ್ನು ನಿರ್ಬಂಧಿಸಬಾರದು ಮತ್ತು ಭಕ್ತರ ಸಂಖ್ಯೆ ಹೆಚ್ಚಿದ್ದರೆ, ಪಾಳಿಯಲ್ಲಿ ಪ್ರಾರ್ಥನೆಗಳನ್ನು ನಡೆಸಬೇಕು. ಅಲ್ಲದೇ ತೆರೆದ ಪ್ರದೇಶಗಳಲ್ಲಿ ಯಾವುದೇ ಪ್ರಾಣಿ ಬಲಿ ನೀಡಬಾರದು ಮತ್ತು ನಿಷೇಧಿತ ಪ್ರಾಣಿಗಳ ಬಲಿ ತಡೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರಾಣಿ ಬಲಿಯ ನಂತರ ಯಾವುದೇ ಅನೈರ್ಮಲ್ಯದ ಪರಿಸ್ಥಿತಿಗಳು ಉದ್ಭವಿಸದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಸರಿಯಾದ ನೈರ್ಮಲ್ಯ ವ್ಯವಸ್ಥೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಇನ್ನು ದುಷ್ಕರ್ಮಿಗಳ ಮೇಲೆ ತೀವ್ರ ನಿಗಾ ಇಡಬೇಕು. ಈದ್ಗಾಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್ಗಳನ್ನು ಬಳಸಿಕೊಂಡು ಕಣ್ಗಾವಲು ನಡೆಸಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನೋಡಿರಿ

