ಬೆಂಗಳೂರಿಗೂ ವಕ್ಕರಿಸಿತಾ ಮಹಾಮಾರಿ ಎಬೋಲಾ? – ಉಗಾಂಡ ಮಹಿಳೆ ಲ್ಯಾಬ್ ರಿಪೋರ್ಟ್ನಲ್ಲೇನಿದೆ?

ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್ನ ರೋಗ ಲಕ್ಷಣ ಕಂಡುಬಂದಿತ್ತು. ಇದು ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಮಹಿಳೆಯ ಲ್ಯಾಬ್ ರಿಪೋರ್ಟ್ ಬಂದಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ.
ಇದನ್ನೂ ಓದಿ: ಮ್ಯೂಸಿಕಲ್ ಚೇರ್ ನಲ್ಲಿ ಗೆದ್ದ ಡಿಕೆಶಿ.. ಕುರ್ಚಿ ಬಿಡಲು ಸಿದ್ಧರಾದ ಸಿದ್ದು – ಸಚಿವರಿಗೆ ಈಗ ಢವಢವ!
ಉಗಾಂಡಾದ ರಾಜಧಾನಿ ಕ್ಯಾಂಪಾಲಾ ನಿವಾಸಿ ನಗಿರೆ ಲತೀಫಾ ಎಂಬುವವರು ಮೇ 23ರಂದು ಬೆಂಗಳೂರಿಗೆ ಬಂದಿದ್ದರು. ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಲತೀಫಾಗೆ ಎಬೋಲಾ ವೈರಸ್ಗೆ ಹೋಲುವ ಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಐಸೋಲೇಷನ್ ನಲ್ಲಿ ಇರಿಸಲಾಗಿತ್ತು. ಸೋಂಕು ದೃಢೀಕರಣಕ್ಕಾಗಿ ರಕ್ತದ ಮಾದರಿಗಳನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಲತೀಫಾಗೆ ಯಾವುದೇ ಸೋಂಕು ತಗುಲಿಲ್ಲ. ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆಕೆ ಆರೋಗ್ಯವಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನೋಡಿರಿ

