CSK ಕೋಚ್ ದ್ರಾವಿಡ್ ಅಲ್ಲ ಧೋನಿ? – 30 ಕೋಟಿಗೆ ವೈಭವ್ ಹರಾಜು!?
MIನಿಂದ ಹಾರ್ದಿಕ್ ತಲೆದಂಡ

CSK ಕೋಚ್ ದ್ರಾವಿಡ್ ಅಲ್ಲ ಧೋನಿ? – 30 ಕೋಟಿಗೆ ವೈಭವ್ ಹರಾಜು!?MIನಿಂದ ಹಾರ್ದಿಕ್ ತಲೆದಂಡ

ಐಪಿಎಲ್ ಟೂರ್ನಿ ಈಗ ರೋಚಕ ಘಟ್ಟ ತಲುಪಿದೆ. ಈ ಟೂರ್ನಿಯ ಅಂಗಳದಲ್ಲಿ ನಡೆಯುತ್ತಿರುವ ಕೆಲ ಸ್ವಾರಸ್ಯಕರ ಘಟನೆಗಳ ಸಂಕ್ಷಿಪ್ತ ಸುದ್ದಿ ಇಲ್ಲಿದೆ.

ಇದನ್ನೂ ಓದಿ: T-20ಯಲ್ಲಿ 200 ರನ್ಸ್ ಟಾರ್ಗೆಟ್ – 2027ಕ್ಕೆ ವೈಭವ್ ಗೆ ₹50 ಕೋಟಿ ಬಿಡ್?

ಇಂದು  ಎರಡನೇ ಕ್ವಾಲಿಫೈಯರ್ ಪಂದ್ಯ RR Vs GT ವಿರುದ್ಧ ನಡೆಯಲಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ಆರ್‌ಸಿಬಿ ವಿರುದ್ಧ 92 ರನ್‌ಗಳ ಸೋಲು ಕಂಡಿರುವ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ್ ತಂಡ ಫೈನಲ್‌ಗಾಗಿ ಕಾದಾಟವನ್ನು ನಡೆಸಲಿದೆ. ಈ ಪಂದ್ಯ ನ್ಯೂ ಚಂಡೀಗಢ ಮೈದಾನದಲ್ಲಿ ನಡೆಯಲಿದ್ದು,  ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಮೇ 31 ರಂದು ಆರ್‌ಸಿಬಿ ವಿರುದ್ಧ ಫೈನಲ್‌ನಲ್ಲಿ ಕಾದಾಟವನ್ನು ನಡೆಸಲಿದೆ.

ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣ ಸಂಪೂರ್ಣವಾಗಿ ಬ್ಯಾಟರ್‌ಗಳ ಸ್ವರ್ಗವಾಗಿದ್ದು, GT VS RR ನಡುವೆ ಬಿಗ್ ಫೈಟ್ ನಡೆಯಲಿದೆ. ಈ ಸೀಸನ್‌ನಲ್ಲಿ ಇಲ್ಲಿ ಆಡಲಾದ 5 ಪಂದ್ಯಗಳಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಮೊತ್ತವೇ 220 ರನ್ ಆಗಿದೆ. ಅಷ್ಟೇ ಅಲ್ಲದೆ, ಇಲ್ಲಿ 223 ರನ್‌ಗಳ ಬೃಹತ್ ಮೊತ್ತವನ್ನೂ ಸುಲಭವಾಗಿ ಚೇಸ್ ಮಾಡಲಾಗಿದೆ. ನಾಕೌಟ್ ಪಂದ್ಯದ ಒತ್ತಡ ಇರುವುದರಿಂದ, ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲಿದೆ. ಎರಡೂ ತಂಡಗಳಲ್ಲಿ ಮ್ಯಾಚ್ ವಿನ್ನರ್‌ಗಳ ದಂಡೇ ಇರುವುದರಿಂದ ಮೈದಾನದಲ್ಲಿ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.

ಮುಂಬೈ ಇಂಡಿಯನ್ಸ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಎಂಐ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರ ಮೊದಲ ಹೆಜ್ಜೆಯಾಗಿ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅವರ ತಲೆದಂಡವಾಗಲಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ. ಕಳೆದ ಮೂರು ಸೀಸನ್​ಗಳಲ್ಲಿ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

2026ರ ಐಪಿಎಲ್​​ನಲ್ಲಿ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿದ್ದಾರೆ. ಇವರ ಈ ಅದ್ಭುತ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಸೆಹ್ವಾಗ್ ₹30 ಕೋಟಿ ಬೆಲೆ ಕಟ್ಟಿದ್ದಾರೆ.  ವೈಭವ್ ಅವರ ಬ್ಯಾಟಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಹರಾಜಿಗೆ ಬಂದರೆ ಯುವ ಆಟಗಾರನಿಗೆ ಎಷ್ಟು ಹಣ ನೀಡುತ್ತೀರಿ ಎಂದು ವೀರೇಂದ್ರ ಸೆಹ್ವಾಗ್ ಅವರನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸೆಹ್ವಾಗ್ ಯಾವುದೇ ಹಿಂಜರಿಕೆಯಿಲ್ಲದೆ 30 ಕೋಟಿ ರೂ. ನೀಡುವುದಾಗಿ ಹೇಳಿದರು.

ಸನ್‌ರೈಸರ್ಸ್ ಹೈದರಾಬಾದ್‌ ಎದುರಿನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಆಡಿದ ಸ್ಪೋಟಕ ಇನ್ನಿಂಗ್ಸ್‌ ನೋಡಿ ಆಕಾಶ್‌ ಚೋಪ್ರಾ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ರಾಜಸ್ಥಾನ ರಾಯಲ್ಸ್, ವೈಭವ್ ಸೂರ್ಯವಂಶಿ ಅವರನ್ನು ಅಷ್ಟು ಸುಲಭಕ್ಕೆ ತಂಡದಿಂದ ರಿಲೀಜ್‌ ಮಾಡುವುದಿಲ್ಲ.  ಒಂದು ವೇಳೆ ಫ್ರಾಂಚೈಸಿಯ ಪರ್ಸ್‌ ಅನ್ನು 200 ಕೋಟಿ ರುಪಾಯಿಗೆ ಹೆಚ್ಚಿಸಿದರೆ, ವೈಭವ್ ಸೂರ್ಯವಂಶಿಗೆ ಕನಿಷ್ಠ 50 ಕೋಟಿ ರುಪಾಯಿ ಹರಾಜಾಗಬಹುದು ಎಂದು ಹೇಳಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅವರ ಅದ್ಭುತ ಪ್ರದರ್ಶನ ಯಶಸ್ವಿ ಜೈಸ್ವಾಲ್ ಅವರ ಸ್ಥಾನವನ್ನು ಅಲುಗಾಡಿಸಿದೆ. ಈ ಕುರಿತು ಅಂಬಟಿ ರಾಯುಡು, ಜೈಸ್ವಾಲ್ ರಾಜಸ್ಥಾನ್ ತೊರೆದು ಮುಂಬೈ ಇಂಡಿಯನ್ಸ್ ಸೇರಬೇಕು ಎಂದು ಸಲಹೆ ನೀಡಿದ್ದಾರೆ. ವೈಭವ್ ನೆರಳಿನಲ್ಲಿ ಸಿಲುಕದೆ, ಸ್ಟಾರ್ ಆಟಗಾರನಾಗಿ ಮುಂದುವರಿಯಲು ಹೊಸ ವೇದಿಕೆ ಅಗತ್ಯ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ. ಜೈಸ್ವಾಲ್ ಮುಂಬೈ ಇಂಡಿಯನ್ಸ್‌ಗೆ ಉತ್ತಮ ಆಯ್ಕೆ ಎಂದೂ ಅವರು ಸೂಚಿಸಿದ್ದಾರೆ.

IPL ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿ ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್  ಅಥವಾ  ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ.

CSK ಹೆಡ್ ಕೋಚ್  ಸ್ಟೀಫನ್ ಫ್ಲೆಮಿಂಗ್ ಅವರ ಸ್ಥಾನ ಅಪಾಯದಲ್ಲಿದ್ದು, ಮುಂದಿನ ಹೆಡ್ ಕೋಚ್ ಯಾರಾಗ್ತಾರೆ ಅನ್ನೋ ಪ್ರಶ್ನೆ ಎದ್ದಿದೆ. ಇಷ್ಟು ದಿನ ಚೆನ್ನೈ ಸೂಪರ್ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್ ಆಗ್ತಾರೆ ಅನ್ನೋ ಚರ್ಚೆ ನಡೆಯುತಿತ್ತು. ಆದ್ರೆ ಈಗ ಧೋನಿನೇ ಮುಂದಿನ ಸೀಸನ್‌ಗೆ ಹೆಡ್ ಕೋಚ್ ಆಗ್ತಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗ್ತಿದೆ. ಕಳೆದ ಎರಡು ಸೀಸನ್‌ನಲ್ಲಿ  ಪಂದ್ಯ ಗೆಲ್ಲೋಕೆ ಪರದಾಡಿದ ಸಿಎಸ್‌ಕೆ, ಮುಂದಿನ ಸೀಸನ್‌ನಲ್ಲಿ ಶಕ್ತಿ ಶಾಲಿಯಾಗಿ ಬರುವುದ್ದಕ್ಕೆ ಎದುರು ನೋಡುತ್ತಿದೆ.

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. 189 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 150 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 38 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

 

 

Kishor KV