ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ –ಸಿಎಲ್‌ಪಿ ಸಭೆಯಲ್ಲಿ ಅಧಿಕೃತ ಘೋಷಣೆ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ –ಸಿಎಲ್‌ಪಿ ಸಭೆಯಲ್ಲಿ ಅಧಿಕೃತ ಘೋಷಣೆ

ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿಯವನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಜೂನ್ 3ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ – ನೊಣವಿನಕೆರೆ ಅಜ್ಜಯ್ಯ ಹೇಳಿದ್ದಂತೆ ಮುಹೂರ್ತ ಫಿಕ್ಸ್

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.  ಜೂನ್ 3ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಿಎಲ್​​ಪಿ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಸಂಬಂಧ ಸಿದ್ದರಾಮಯ್ಯ ನಿರ್ಣಯ ಮಂಡನೆ ಮಾಡಿದ್ದು, ಇದನ್ನು ಜಿ. ಪರಮೇಶ್ವರ್​​ ಅನುಮೋದಿಸಿದ್ದಾರೆ. ಎಲ್ಲ ಶಾಸಕರು ಈ ತೀರ್ಮಾನವನ್ನು ಸರ್ವಾನುಮತದಿಂದ ಒಪ್ಪಿದ್ದಾರೆ. ಸಭೆಯಲ್ಲಿ ವೀಕ್ಷಕರಾಗಿ ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಿದ್ದರು. ಸಭೆಗೂ ಮೊದಲು ವಿಧಾನಸೌಧ ಕೊಠಡಿಯಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿಯೇ ಡಿಕೆಶಿ ಆಗಮಿಸಿದ್ದರು.

ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಪ್ರಸ್ತಾಪ ಮಾಡಿದ್ದರು. ಮುಂದಿನ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಹೇಳಿದರು. ಇನ್ನು ಕ್ಯಾಬಿನೆಟ್ ರಚನೆ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

 

Sulekha

Leave a Reply

Your email address will not be published. Required fields are marked *