ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ – ಸಚಿವರಾಗಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ

ರಾಜ್ಯದಲ್ಲಿ ನೂತನ ಸರ್ಕಾರದ ರಚನೆಗೆ ಇನ್ನು ಕೆಲವೇ ಕ್ಷಣಗಳಷ್ಟೇ ಬಾಕಿ. ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ರಚನೆಗೆ ಭರದಿಂದ ಸಿದ್ಧತೆ ನಡೆದಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಯು.ಟಿ ಖಾದರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ದಿಢೀರ್ ಗುಡ್‌ಬೈ ಹೇಳಿದ ಅಣ್ಣಾಮಲೈ – ತಮಿಳುನಾಡಲ್ಲಿ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ
ಸಚಿವರ ಮೊದಲ ಪಟ್ಟಿ ಫೈನಲ್ ಆಗಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಲಿಸ್ಟ್ ಹೊರಬೀಳಲಿದೆ. ಇದಕ್ಕೂ ಮೊದಲೇ ಯು.ಟಿ ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಖಾದರ್ ಜೊತೆ ಉಪಸಭಾಪತಿ ರುದ್ರಪ್ಪ ಲಮಾಣಿ ಕೂಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಂಪುಟ ಸೇರೋ ಸಚಿವರ ಲಿಸ್ಟ್ ಹೊರ ಬರುವ ಮುನ್ನವೇ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಖಾದರ್ ಡಿಕೆಶಿ ಸಂಪುಟ ಸೇರೋದು ಖಚಿತ ಎನ್ನಲಾಗ್ತಿದೆ.
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಖಾದರ್ ಅವರಿಗೆ ಕೊನೆ ಕ್ಷಣದಲ್ಲಿ ಸ್ಪೀಕರ್ ಹುದ್ದೆ ನೀಡಲಾಗಿತ್ತು. ಆಗಲೇ ಭವಿಷ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವೇಳೆ ಅವಕಾಶ ನೀಡುವ ಭರವಸೆ ನೀಡಲಾಗಿತ್ತು ಎನ್ನಲಾಗುತ್ತಿದೆ. ಇದೀಗ ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ಜೂನ್ 2ರ ಸಂಜೆಯೇ ಯು.ಟಿ ಖಾದರ್ ಮಂಗಳೂರಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಖಾದರ್, ನನಗೆ ಸಚಿವ ಸ್ಥಾನದ ಅಧಿಕೃತ ಮಾಹಿತಿ ಇನ್ನೂ ಬಂದಿಲ್ಲ. ಅಧಿಕಾರ ಹುಡುಕಿಕೊಂಡು ಹೋಗಬಾರದು, ನಮ್ಮನ್ನ ಹುಡುಕಿಕೊಂಡು ಬರಬೇಕು ಎಂದರು.

ನೋಡಿರಿ

