ಬಿ.ಕೆ ಹರಿಪ್ರಸಾದ್‌ಗೆ ಕೆಪಿಸಿಸಿ ಪಟ್ಟ ಕಟ್ಟಿದ ಹೈಕಮಾಂಡ್ – ಸತೀಶ್ ಜಾರಕಿಹೊಳಿ ಕೈ ತಪ್ಪಿದ ಅಧ್ಯಕ್ಷಗಿರಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊನೆಗೂ ಬಿ.ಕೆ ಹರಿಪ್ರಸಾದ್ ಅವರಿಗೆ ಒಲಿದಿದೆ. ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟ ಬೆಳಗಾವಿ ಸಾಹುಕಾರ್ ಸಹಜವಾಗಿಯೇ ನಿರಾಶೆಗೊಂಡಿದ್ದಾರೆ.
ಇದನ್ನೂ ಓದಿ:ದೇವೇಗೌಡ, ಬಿಎಸ್‌ವೈ ಕಾಲಿಗೆ ನಮಸ್ಕರಿಸಿದ ಡಿಕೆಶಿ – ಪದಗ್ರಹಣಕ್ಕೆ ಸಿದ್ದು ಸೇರಿ ಮಾಜಿ ಸಿಎಂಗಳಿಗೆ ಆಹ್ವಾನ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಕೆಪಿಸಿಸಿ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಬೆಳಗಾವಿ ಸಾಹುಕಾರ್ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್ ನೀಡಿದೆ. ಕೊನೆಯ ಕ್ಷಣದಲ್ಲಿ ಒಬಿಸಿ ಸಮುದಾಯದ ನಾಯಕನಿಗೆ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿದ್ದು, ಕೆಪಿಸಿಸಿ ಕುರ್ಚಿ ಬಿ.ಕೆ.ಹರಿಪ್ರಸಾದ್ ಪಾಲಾಗಿದೆ.
ಒಬಿಸಿ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಎಐಸಿಸಿ ನಿರ್ಧರಿಸಿದ್ದು, ಬಿಲ್ಲವ ಸಮುದಾಯದ ಬಿಕೆ ಹರಿಪ್ರಸಾದ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಒಲಿದಿದೆ. ಎಐಸಿಸಿಯಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ತನಗೆ ಪಕ್ಷ ಯಾವ ಜವಾಬ್ದಾರಿ ಕೊಡುತ್ತೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅಧಿಕೃತವಾಗಿ ಮಾಹಿತಿ ಬರುವವರೆಗೂ ಕಾಯೋಣ. ಹೈಕಮಾಂಡ್ ಹೇಳಿದ್ದನ್ನ ನಾನೂ ಸೇರಿದಂತೆ ಎಲ್ಲರೂ ಒಪ್ಪಿಕೊಳ್ಳಬೇಕು. ನನ್ನ ಬಗ್ಗೆ ಅಪಪ್ರಚಾರ ಮಾಡಿದವರ ಬಗ್ಗೆ ಪೊಲೀಸ್ ತನಿಖೆ ಆಗ್ತಿದೆ. ನಿಜಾಂಶ ಹೊರ ಬರುತ್ತೆ ಎಂದಿದ್ದಾರೆ. ಅಲ್ಲದೆ ಡಾ.ಜಿ.ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ಸಿಕ್ಕರೆ ಒಳ್ಳೆಯದೆ. ಅವರು ಹಿರಿಯ ದಲಿತ ನಾಯಕರು ಎಂದೂ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನೋಡಿರಿ

