ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ – ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪದಗ್ರಹಣ
ಉಪಮುಖ್ಯಮಂತ್ರಿಯಾಗಿ ಡಾ. ಜಿ ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. [ಡಿ.ಕೆ ಶಿವಕುಮಾರ್ ಅವರು ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಗಮನಸೆಳೆದರು.
ಇನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪರಮೇಶ್ವರ್ ಅವರು ಡಾ.ಬಿ.ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೇರಳಂ ಸಿಎಂ ಸತೀಶನ್, ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನೋಡಿರಿ

