ಚೊಚ್ಚಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್ ಸೂರ್ಯವಂಶಿ – ಭರ್ಜರಿ ಶತಕ ಸಿಡಿಸಿದ ರುತುರಾಜ್ ಗಾಯಕ್ವಾಡ್

ಐಪಿಎಲ್ ಹೀರೋಗಳಾದ ವೈಭವ್ ಸೂರ್ಯವಂಶಿ ಮತ್ತು ಪ್ರಭ್ಸಿಮ್ರಾನ್ ತಮ್ಮ ಚೊಚ್ಚಲ ಪಂದ್ಯಗಳಲ್ಲೇ ನಿರಾಸೆ ಮೂಡಿಸಿದ್ದಾರೆ. ಭಾರತ ಎ ಪರ ಹೊಸ ಇನಿಂಗ್ಸ್ ಆರಂಭಿಸಿದ ಸಿಡಿಲಬ್ಬರದ ಬ್ಯಾಟರ್ಸ್ ಶ್ರೀಲಂಕಾ ಎ ತಂಡದ ಎದುರು ಸದ್ದು ಮಾಡದೇ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಇದನ್ನೂ ಓದಿ:ಸಿಡಿದ ಮರಿ ತೆಂಡೂಲ್ಕರ್ – ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅರ್ಜುನ್ ತೆಂಡೂಲ್ಕರ್
ವಂಡರ್ ಕಿಡ್ ವೈಭವ್ ಸೂರ್ಯವಂಶಿ ತನ್ನ ಮೊದಲ ಏಕದಿನ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದಲ್ಲಿ ಪಾದಾರ್ಪಣೆ ಮಾಡಿದ್ದು, ಮೊದಲ ಪಂದ್ಯದಲ್ಲಿ ಬೇಗನೇ ಔಟಾಗಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆರಂಭಿಕರಾಗಿ ವೈಭವ್ ಸೂರ್ಯವಂಶಿ ಮತ್ತು ಪ್ರಭ್ಸಿಮ್ರಾನ್ ಕಣಕ್ಕಿಳಿದಿದ್ದರು. ವೈಭವ್ ಸೂರ್ಯವಂಶಿ ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದರು. ಜೊತೆಗೆ 3 ಫೋರ್ ಕೂಡಾ ಬಾರಿಸಿದರು. ಆದರೆ, 14 ರನ್ಗಳಿಸಿದ ವೈಭವ್ ಔಟಾದರು. ಪ್ರಭ್ಸಿಮ್ರಾನ್ ಸಿಂಗ್ 2 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32 ರನ್ಗಳ ಕೊಡುಗೆ ನೀಡಿದರು.
ಮತ್ತೊಂದೆಡೆ ಭಾರತ ಎ ತಂಡದ ಪರ ರುತುರಾಜ್ ಗಾಯಕ್ವಾಡ್ ಆಕರ್ಷಕ ಶತಕ ಬಾರಿಸಿದ್ದಾರೆ. ರುತುರಾಜ್ ಜೊತೆ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್ನೊಂದಿಗೆ ಇನಿಂಗ್ಸ್ ಕಟ್ಟುತ್ತಿದ್ದಾರೆ. ತಿಲಕ್ ವರ್ಮಾ ಕೂಡಾ ಅರ್ಧಶತಕ ಸಿಡಿಸಿದ್ದಾರೆ.

ನೋಡಿರಿ

