ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನೋ ಎಂಟ್ರಿ – ಜೂನ್ 15 ರಿಂದಲೇ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನೋ ಎಂಟ್ರಿ – ಜೂನ್ 15 ರಿಂದಲೇ ಸಂಚಾರ ನಿಷೇಧ

ಆಗುಂಬೆ ಘಾಟಿ ಮೇಲೆ ಪ್ರಯಾಣ ಮಾಡುವವರು ಈ ಸುದ್ದಿ ಗಮನಿಸಲೇಬೇಕು. ಮಳೆಗಾಲದಲ್ಲಿ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳಿಗೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:ಮಗಳ ಹತ್ಯೆ ವಿಚಾರದಲ್ಲಿ ಉಲ್ಟಾ ಹೊಡೆದ ಪ್ರಿಯಾಂಕ – ಖಾಕಿ ವಿಚಾರಣೆ ಮುಂದೆ ಪ್ರೇಮಿ ವಿರುದ್ಧವೇ ದೂರು

ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಭೂಕುಸಿತ ಮತ್ತು ಅಪಘಾತಗಳನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಉಡುಪಿ ಹಾಗೂ ಶಿವಮೊಗ್ಗ ನಡುವೆ ಸಂಚರಿಸುವ ವಾಹನಗಳಿಗೆ ಕೊಲ್ಲೂರು ಮತ್ತು ಶೃಂಗೇರಿ ಜಾಗೋಳಿ ಮಾರ್ಗವಾಗಿ ಪರ್ಯಾಯ ರಸ್ತೆಗಳನ್ನು ಕಲ್ಪಿಸಲಾಗಿದೆ. ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾದರೆ ರಸ್ತೆ ಬದಿಯ ಭೂಕುಸಿತ ಸಂಭವಿಸುವ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಅಪಾಯವಿದೆ. ಇದೇ ವೇಳೆ, ಮತ್ತೊಂದು ಪ್ರಮುಖ ಸಂಪರ್ಕ ರಸ್ತೆಯಾದ ಹುಲಿಕಲ್ ಘಾಟಿಯಲ್ಲೂ ಭೂಕುಸಿತ ಸಂಭವಿಸಿದ್ದು, ಅಲ್ಲಿನ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆಗುಂಬೆ ಘಾಟಿ ಮಾರ್ಗವು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಉಡುಪಿ, ಮಂಗಳೂರು ಹಾಗೂ ಮಣಿಪಾಲ್ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗೆ ತೆರಳಲು ಪ್ರಮುಖ ಸಂಪರ್ಕವಾಗಿದೆ. ಇದೀಗ ಈ ಆದೇಶದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತವು ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

Sulekha

Leave a Reply

Your email address will not be published. Required fields are marked *