ಧರ್ಮಶಾಲಾದಲ್ಲಿ ಆರೆಂಜ್ ಅಲರ್ಟ್ – ಭಾರತ vs ಅಫ್ಘಾನಿಸ್ತಾನ್ ಮೊದಲ ಏಕದಿನ ಪಂದ್ಯ ನಡೆಯುತ್ತಾ?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ, ಧರ್ಮಶಾಲಾದಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ಇದನ್ನೂ ಓದಿ:ಗೌತಮ್ ಗಂಭೀರಕ್ಕೆ RO-KO ಸೆಡ್ಡು – BCCI ಆಫೀಸರ್ಸ್ ಜತೆ ಡೈರೆಕ್ಟ್ ಡೀಲ್
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಏಕದಿನ ಸರಣಿ ಇವತ್ತು(ಜೂನ್ 13) ಮಧ್ಯಾಹ್ನ 1.30ಕ್ಕೆ ಆರಂಭವಾಗಬೇಕಿತ್ತು. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯಿಂದಾಗಿ ವಿಳಂಬವಾಗಿದೆ. ಹೆಚ್ಪಿಸಿಎ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ ಟಾಸ್ ನಡೆಯಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಪಿಚ್ ಮತ್ತು ಔಟ್‌ಫೀಲ್ಡ್ ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಹವಾಮಾನ ಇಲಾಖೆ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಧರ್ಮಶಾಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಂದ್ಯದ ಅವಧಿಯಲ್ಲಿ ಸುಮಾರು ಶೇ. 90 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಇವತ್ತಿನ ಪಂದ್ಯ ನಡೆಯುವುದೇ ಅನುಮಾನ ಎಂದು ಹೇಳಲಾಗುತ್ತಿದೆ. ಮಳೆ ನಿಂತರೂ ಸಹ ಔಟ್‌ಫೀಲ್ಡ್ ಅನ್ನು ಒಣಗಿಸಲು ಮೈದಾನದ ಸಿಬ್ಬಂದಿಗೆ ಹೆಚ್ಚಿನ ಸಮಯ ಬೇಕಾಗುವುದರಿಂದ, ಪಂದ್ಯದ ಓವರ್‌ಗಳನ್ನು ಕಡಿತಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಇಲ್ಲವೇ ಪಂದ್ಯ ವಿಳಂಬ ಇಲ್ಲ, ರದ್ದಾದರೂ ಅಚ್ಚರಿಯಿಲ್ಲ. ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಈವರೆಗೆ ಒಟ್ಟು 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮೂರು ಬಾರಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಇನ್ನು ಒಂದು ಪಂದ್ಯವು ಟೈನಲ್ಲಿ ಅಂತ್ಯಗೊಂಡಿದೆ.

ನೋಡಿರಿ

