ನಾಳೆ ಟೀಂ ಇಂಡಿಯಾಕ್ಕೆ ಎರಡೆರಡು ಪಂದ್ಯ – ಏಕದಿನ ಸರಣಿ ಮುಗಿಯುತ್ತಿದ್ದಂತೆ T20I ಶುರು

ನಾಳೆ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದೂಟ ಸಿಗಲಿದೆ. ನಾಳೆ ಟೀಂ ಇಂಡಿಯಾದ ಎರಡೆರಡು ಪಂದ್ಯ ನಡೆಯಲಿದೆ. ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ಪುರುಷ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿ ಭಾರತದ ಪುರುಷರ ತಂಡವಿದೆ. ಮತ್ತೊಂದೆಡೆ ಭಾರತ ಮಹಿಳಾ ಕ್ರಿಕೆಟ್ ತಂಡ, 2026 ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ತನ್ನ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ.
ಅಫ್ಘಾನ್ ವಿರುದ್ಧ 2ನೇ ಗೆಲುವಿಗಾಗಿ ಭಾರತ ಸೆಣಸಾಟ
ನಾಳೆ ಧರ್ಮಶಾಲಾದಲ್ಲಿ ಅಫ್ಘಾನ್ ವಿರುದ್ಧ ಟೀಂ ಇಂಡಿಯಾ ದಿಟ್ಟ ಹೋರಾಟ ನಡೆಸಲಿದೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಶುಭ್ಮನ್ ಗಿಲ್ ಪಡೆ 7 ವಿಕೆಟ್ಗಳಿಂದ ಗೆದ್ದುಕೊಂಡಿತ್ತು. ಮಳೆ ಪೀಡಿತ ಈ ಪಂದ್ಯವನ್ನು ತಲಾ 25 ಓವರ್ಗಳಿಗೆ ನಿಗದಿಪಡಿಸಲಾಗಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು ಇನ್ನು 7 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ನಾಳಎ ನಡೆಯಲಿದೆ. ಉತ್ತರ ಪ್ರದೇಶದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಭಾರತ ಗೆದ್ದರೆ, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿ ಟೀಂ ಇಂಡಿಯಾ ಪಾಲಾಗಲಿದೆ. ಇತ್ತ ಅಫ್ಘಾನಿಸ್ತಾನ ಗೆದ್ದರೆ, ಸರಣಿ 1-1 ರಿಂದ ಸಮಬಲಗೊಳ್ಳಲಿದೆ. ಈ ಪಂದ್ಯ ನಾಳೆ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಟೀಂ ಇಂಡಿಯಾ ಹೋರಾಟ
ಇತ್ತ 2026 ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಲೀಗ್ ಹಂತದಲ್ಲಿ ತನ್ನ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ. ಪಾಕ್ ವಿರುದ್ಧ ಗೆದ್ದ ಭಾರತ ತಂಡ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿತ್ತು. ಇದೀಗ ಭಾರತ ವನಿತಾ ತಂಡ ತನ್ನ ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ನಾಳೆ ಎದುರಿಸಲಿದೆ. ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸಿ ಸೋತಿತ್ತು. ಹೀಗಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು ನೆದರ್ಲ್ಯಾಂಡ್ಸ್ ಪ್ರಯತ್ನಿಸಲಿದೆ. ಹೆಡ್ಡಿಂಗ್ಲಿ ಮೈದಾನದಲ್ಲಿ ನಡೆಯುವ ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ನೋಡಿರಿ

