ಅಮ್ಮನ ಮುಂದೆಯೇ ಪ್ರಾಣ ಬಿಟ್ಟ ಬಾಡಿ ಬಿಲ್ಡರ್ – ಜಿಮ್ ಮುಗಿಸಿಕೊಂಡ ಮನೆಗೆ ಬಂದಾಗ ಆಗಿದ್ದೇನು ಗೊತ್ತಾ?

ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು.ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾನೆ.
ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಮುಂಗಾರಿನ ಕೊರತೆಯಿಂದ ಕಂಗೆಟ್ಟ ರೈತರು – ಉಪಗ್ರಹ ಚಿತ್ರಗಳಲ್ಲಿ ಮೋಡಗಳು ಸುಳಿವೇ ಇಲ್ಲ!
ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಬಂದಿದ್ದ ಸುಶೀಲಕುಮಾರ್, ಸಂಜೆ ಎಂದಿನಂತೆ ಜಿಮ್‌ಗೆ ಹೊರಡಲು ಸಿದ್ಧರಾಗಿದ್ದರು. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ತಾಯಿಯನ್ನ ಕೆಲಸಕ್ಕೆ ಬಿಡಲು ಮುಂದಾಗಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ತಲೆಸುತ್ತು ಬಂದಿದೆ. ಬಿಪಿ ಲೋ ಆಗಿರುವುದು ಕಂಡುಬಂದಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಸುಶೀಲಕುಮಾರ್ ಕೊನೆಯುಸಿರೆಳೆದಿದ್ದಾರೆ. ಹೆತ್ತ ತಾಯಿಯ ಕಣ್ಣೆದುರೇ ಮಗನ ಜೀವ ಹೋಗಿರುವುದು ಮಾತ್ರ ಎಂಥವರಿಗಾದರೂ ಕಣ್ಣೀರು ಬರುತ್ತವೆ.

ನೋಡಿರಿ

