ನಾಯಕತ್ವದ ವಿರುದ್ಧ ಅಸಮಾಧಾನ ಸ್ಫೋಟ – ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ

ನಾಯಕತ್ವದ ವಿರುದ್ಧ ಅಸಮಾಧಾನ ಸ್ಫೋಟ – ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್  ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡಿದ್ದಾರೆ.

ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು ಹಾಗೂ ಸ್ವಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್  ಸೋಮವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುವಂತಾಗಿರುವುದು ಬ್ರಿಟನ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ಕಳೆದ 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ ಇವರಾಗಿದ್ದಾರೆ.

ಇದನ್ನೂ ಓದಿ:ಮೃಗಶಿರದಲ್ಲಿ ಮಳೆರಾಯನ ಆರ್ಭಟವಿಲ್ಲ – ಆರಿದ್ರಾ ದೂರ ಮಾಡುತ್ತಾ ದಾರಿದ್ರ್ಯ?

ಲಂಡನ್‌ನ ಪ್ರಧಾನಿ ಅಧಿಕೃತ ನಿವಾಸ ’10 ಡೌನಿಂಗ್ ಸ್ಟ್ರೀಟ್’ನ ಹೊರಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, “ಮುಂದಿನ ಚುನಾವಣೆಗೆ ಪಕ್ಷವನ್ನು ಮುನ್ನಡೆಸಲು ನಾನು ಸರಿಯಾದ ವ್ಯಕ್ತಿಯೇ ಎಂದು ನನ್ನ ಪಕ್ಷ ಕೇಳುತ್ತಿದ್ದ ಪ್ರಶ್ನೆಗೆ ನನಗೆ ಉತ್ತರ ಸಿಕ್ಕಿದೆ. ಅದಕ್ಕಾಗಿಯೇ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಭಾವುಕರಾಗಿ ನುಡಿದರು.

ಆಂಡಿ ಬರ್ನ್‌ಹ್ಯಾಮ್ ಸವಾಲು: ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಆಂಡಿ ಬರ್ನ್‌ಹ್ಯಾಮ್ ಇತ್ತೀಚೆಗೆ ಸಂಸತ್ ಚುನಾವಣೆಯಲ್ಲಿ ಗೆದ್ದು ಬಂದ ತಕ್ಷಣ, ಪ್ರಧಾನಿ ಸ್ಟಾರ್ಮರ್ ನಾಯಕತ್ವಕ್ಕೆ ಲೇಬರ್ ಪಕ್ಷದೊಳಗೇ ಬಹಿರಂಗ ಸವಾಲು ಎದುರಾಯಿತು. ಬಹುತೇಕ ಸಂಸದರು ಬರ್ನ್‌ಹ್ಯಾಮ್ ಬೆಂಬಲಕ್ಕೆ ನಿಂತಿದ್ದು ಸ್ಟಾರ್ಮರ್ ಇಕ್ಕಟ್ಟಿಗೆ ಸಿಲುಕಿದರು.

Kishor KV

Leave a Reply

Your email address will not be published. Required fields are marked *