ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ – ಪೋರ್ಚುಗಲ್ ಪರ ವಿಶ್ವಕಪ್‌ನಲ್ಲಿ ಅತ್ಯಧಿಕ ಗೋಲು ಬಾರಿಸಿ ದಾಖಲೆ

ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ –  ಪೋರ್ಚುಗಲ್ ಪರ ವಿಶ್ವಕಪ್‌ನಲ್ಲಿ ಅತ್ಯಧಿಕ ಗೋಲು ಬಾರಿಸಿ ದಾಖಲೆ

ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ ಮಾಡಿದ್ದಾರೆ. ಫಿಫಾ ವಿಶ್ವಕಪ್​ನ 45ನೇ ಪಂದ್ಯದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಚರಿತ್ರೆ ಸೃಷ್ಟಿಸಿದ್ದಾರೆ. ಜೊತೆಗೆ ಪೋರ್ಚುಗಲ್ ಪಡೆ 5 ಗೋಲುಗಳಿಸುವ ಮೂಲಕ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ:ಫಿಫಾ ವಿಶ್ವಕಪ್‌ನಲ್ಲಿ ಮೆಸ್ಸಿ ಚರಿತ್ರೆ – ಗೋಲ್ಡನ್ ಬೂಟ್ ಈ ಸಲ ಮೆಸ್ಸಿಗೆ ಫಿಕ್ಸ್..

ಫುಟ್‌ಬಾಲ್ ಸಾಮ್ರಾಜ್ಯದ ಅಧಿಪತಿ, ದಾಖಲೆಗಳ ಸರದಾರ ಕ್ರಿಸ್ಟಿಯಾನೊ ರೊನಾಲ್ಡೊ ಫಿಫಾ ವಿಶ್ವಕಪ್​ ಇತಿಹಾಸದಲ್ಲೇ ಅಪರೂಪದ ವಿಶ್ವ ದಾಖಲೆ ಮಾಡಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ ಒಂದೇ ಮ್ಯಾಚ್​ನಲ್ಲಿ ಎರಡು ಗೋಲು ಬಾರಿಸಿ ಮಿಂಚಿದ್ದಾರೆ. ಹೂಸ್ಟನ್‌ನ ಎನ್‌ಆರ್‌ಜಿ ಸ್ಟೇಡಿಯಂನಲ್ಲಿ ನಡೆದ ಉಜ್ಬೇಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕ್ರಿಸ್ಟಿಯಾನೊ 2 ಗೋಲು ಬಾರಿಸುವ ಮೂಲಕ ವಿಶ್ವದಾಖಲೆ ಬರೆದರು. ಪಂದ್ಯ ಆರಂಭವಾದ 6ನೇ ನಿಮಿಷದಲ್ಲೇ ಮೊದಲು ಗೋಲು ಬಾರಿಸಿದ ರೊನಾಲ್ಡೋ, ನಂತರ 39ನೇ ನಿಮಿಷದಲ್ಲಿ ಎರಡನೇ ಗೋಲು ಬಾರಿಸಿದರು. ಈ ಎರಡು ಗೋಲುಗಳೊಂದಿಗೆ ಕ್ರಿಸ್ಟಿಯಾನೊ ಪೋರ್ಚುಗಲ್​ ಪರ ವಿಶ್ವಕಪ್​ನಲ್ಲಿ ಅತ್ಯಧಿಕ ಗೋಲು ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ವಿಶ್ವಕಪ್ ಇತಿಹಾಸದಲ್ಲೇ ಸತತ 6 ಆವೃತ್ತಿಗಳಲ್ಲಿ ಗೋಲು ಬಾರಿಸಿದ ವಿಶ್ವದ ಏಕೈಕ ಕಾಲ್ಚೆಂಡು ಚತುರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಂದರೆ ರೊನಾಲ್ಡೊ ಅವರನ್ನು ಹೊರತುಪಡಿಸಿ ವಿಶ್ವದ ಯಾವುದೇ ಆಟಗಾರ ಸತತ 6 ವಿಶ್ವಕಪ್​ನಲ್ಲಿ ಗೋಲು ಬಾರಿಸಿಲ್ಲ.

ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಈವರೆಗೆ 6 ಫಿಫಾ ವಿಶ್ವಕಪ್ ಆಡಿದ್ದರೂ, ಅವರು 2010ರ ವಿಶ್ವಕಪ್‌ನಲ್ಲಿ ಯಾವುದೇ ಗೋಲು ದಾಖಲಿಸಿರಲಿಲ್ಲ. ಇದೀಗ ಮೆಸ್ಸಿಗೆ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆಯನ್ನು ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮದಾಗಿಸಿಕೊಂಡಿದ್ದಾರೆ.

Sulekha

Leave a Reply

Your email address will not be published. Required fields are marked *