ಇಂದಿನಿಂದ ಭಾರತ ಮತ್ತು ಐರ್ಲೆಂಡ್ ನಡುವೆ T20I ಸರಣಿ ಆರಂಭ – ಸೂರ್ಯವಂಶಿ ಪಾದಾರ್ಪಣೆಗೆ ಮಳೆ ಅಡ್ಡಿ ಸಾಧ್ಯತೆ

ಇಂದಿನಿಂದ ಭಾರತ ಮತ್ತು ಐರ್ಲೆಂಡ್ ನಡುವೆ T20I ಸರಣಿ ಆರಂಭ – ಸೂರ್ಯವಂಶಿ ಪಾದಾರ್ಪಣೆಗೆ ಮಳೆ ಅಡ್ಡಿ ಸಾಧ್ಯತೆ

ಇವತ್ತನಿಂದ ಭಾರತ ಮತ್ತು ಐರ್ಲೆಂಡ್ ನಡುವೆ T20I ಸರಣಿ ಆರಂಭ ಆಗಲಿದ್ದು,ಈ ಪಂದ್ಯದ ಮೇಲೆ ಮಳೆ ಎಫೆಕ್ಟ್ ಬೀಳುವ ಸಾಧ್ಯತೆ ಇದೆ. ಇಂದಿನ ಪಂದ್ಯ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇವತ್ತು ಅಂತರರಾಷ್ಟ್ರೀಯ ಪಂದ್ಯಕ್ಕೆ ವೈಭವ್ ಸೂರ್ಯವಂಶಿ ಪಾದರ್ಪಣೆ ಮಾಡೋ ಸಾಧ್ಯತೆ ಹೆಚ್ಚಿದೆ. ಆದ್ರೆ ಇದಕ್ಕೆ ಮಳೆ ಅಡ್ಡಿ ಮಾಡುವ ಸಾಧ್ಯತೆ ಹೆಚ್ಚಿದೆ.  ಹವಾಮಾನ ವರದಿಯ ಪ್ರಕಾರ, ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಬೆಲ್‌ಫಾಸ್ಟ್‌ನಲ್ಲಿ ಹವಾಮಾನ ಹೇಗಿದೆ?

ಜೂನ್ 26 ಅಂದ್ರೆ ಇಂದು ಬೆಲ್‌ಫಾಸ್ಟ್‌ ನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ವೆಬ್‌ಸೈಟ್ ಅಕ್ಯೂವೆದರ್ ಪ್ರಕಾರ, ಶುಕ್ರವಾರ 5.1 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಶೇಕಡಾ 90 ರಷ್ಟು ಮೋಡ ಕವಿದ ವಾತಾವರಣವಿರಲಿದ್ದು, ಗಾಳಿ ಗಂಟೆಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ. ಮಳೆಯಾಗುವ ಸಾಧ್ಯತೆ ಶೇಕಡಾ 90 ರಷ್ಟು ಇರುವ ಕಾರಣ, ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವ ಸಾಧ್ಯತೆಯಿದೆ.

ಐರ್ಲೆಂಡ್‌ನ ಬೆಲ್‌ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿರುವ ಪಿಚ್ ಸಾಮಾನ್ಯವಾಗಿ ವೇಗದ ಬೌಲರ್‌ಗಳಿಗೆ ಅನುಕೂಲಕರವಾಗಿರುತ್ತದೆ. ಆದಾಗ್ಯೂ, ಆರಂಭಿಕ ಓವರ್‌ಗಳ ನಂತರ, ಬ್ಯಾಟ್ಸ್‌ಮನ್‌ಗಳು ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸುತ್ತಾರೆ. ಬ್ಯಾಟ್ಸ್‌ಮನ್‌ಗಳು ತಾಳ್ಮೆಯಿಂದ ಬ್ಯಾಟಿಂಗ್ ಮಾಡಿ ಕ್ರೀಸ್‌ನಲ್ಲಿ ಸಮಯ ಕಳೆದರೆ, ರನ್ ಗಳಿಸುವುದು ಸುಲಭವಾಗುತ್ತದೆ.

Kishor KV