ಟಿ20 ವಿಶ್ವಕಪ್ನಿಂದ ಹೊರಬಿದ್ದ ಟೀಂ ಇಂಡಿಯಾ – ಆಸ್ಟ್ರೇಲಿಯಾ ವಿರುದ್ದ ಸೋತ ಭಾರತದ ವನಿತೆಯರು

ಮಹಿಳಾ ಟಿ20 ವಿಶ್ವಕಪ್ ನಿಂದ ಭಾರತದ ಹೊರಬಿದ್ದಿದೆ. ನಿರ್ಣಾಯಕ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತು ವಿಶ್ವಕಪ್ನಿಂದ ಹೊರನಡೆಯಿತು.
ಇದನ್ನೂ ಓದಿ:ಟೀಮ್ ಇಂಡಿಯಾ ವಿರುದ್ಧ ಸರಣಿ ಗೆದ್ದ ಕ್ರಿಕೆಟ್ ಶಿಶುಗಳು – ಭಾರತದ ಸೊಕ್ಕು ಮುರಿದ ಐರ್ಲೆಂಡ್
ಆಸ್ಟ್ರೇಲಿಯಾ ಹಾಗೂ ಭಾರತ ಮಹಿಳಾ ತಂಡಗಳ ನಡುವಿನ ಪಂದ್ಯದಲ್ಲಿ ಆಸೀಸ್ಪಡೆ ಟೀಮ್ ಇಂಡಿಯಾವನ್ನು ಸೋಲಿಸಿದೆ. ಲಂಡನ್ನ ಲಾರ್ಡ್ಸ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 170 ರನ್ ಗಳಿಸಿತು. ತಂಡದ ಪರ ನಾಯಕಿಯ ಇನ್ನಿಂಗ್ಸ್ ಆಡಿದ ಹರ್ಮನ್ಪ್ರೀತ್ ಕೌರ್ ಕೊನೆಯ ಓವರ್ನಲ್ಲಿ ಅವರು ಸತತ ಮೂರು ಸಿಕ್ಸರ್ಗಳನ್ನು ಬಾರಿಸಿ ತಂಡವನ್ನು ಈ ಮೊತ್ತಕ್ಕೆ ಕೊಂಡೊಯ್ದರು. ಹರ್ಮನ್ ಪ್ರೀತ್ ಕೌರ್ 27 ಎಸೆತಗಳಲ್ಲಿ 56 ರನ್ಗಳ ಇನ್ನಿಂಗ್ಸ್ ಆಡಿದರೆ, ಸ್ಮೃತಿ ಮಂಧಾನ 37 ಎಸೆತಗಳಲ್ಲಿ 38 ರನ್, ಶಫಾಲಿ ವರ್ಮಾ 26 ಎಸೆತಗಳಲ್ಲಿ 34 ರನ್ ಮತ್ತು ಜೆಮಿಮಾ ರೊಡ್ರಿಗಸ್ 28 ಎಸೆತಗಳಲ್ಲಿ 34 ರನ್ ಗಳಿಸಿದರು. ರಿಚಾ ಘೋಷ್ 1 ರನ್ ಮತ್ತು ದೀಪ್ತಿ ಶರ್ಮಾ 4 ರನ್ ಗಳಿಸಿ ಅಜೇಯರಾಗಿ ಉಳಿದರು.
171 ರನ್ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಮೊದಲ ಓವರ್ನಲ್ಲೇ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ಬಂದ ಬ್ಯಾಟರ್ಗಳು ತಂಡದ ಇನ್ನಿಂಗ್ಸ್ ಕಟ್ಟಿದರು. ಎಲಿಸ್ ಪೆರ್ರಿ ಮತ್ತು ಆಶ್ಲೀ ಗಾರ್ಡ್ನರ್ ಭಾರತದ ಬೌಲರ್ಗಳನ್ನು ಬೆಂಡೆತ್ತಿದರು. ಇವರಿಬ್ಬರು 100 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲ್ಲಿಸಿದರು. ಪೆರ್ರಿ 38 ಎಸೆತಗಳಲ್ಲಿ 56 ಬಾರಿಸಿದರೆ, ಗಾರ್ಡ್ನರ್ 29 ಎಸೆತಗಳಲ್ಲಿ 53 ರನ್ ಕಲೆಹಾಕಿದರು.
ಈ ಸೋಲಿನೊಂದಿಗೆ ಭಾರತ ಟಿ20 ವಿಶ್ವಕಪ್ ಫೈನಲ್ ರೇಸ್ನಿಂದ ಹೊರಬಿದ್ದರೆ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಎ ಗುಂಪಿನಿಂದ ಸೆಮಿಫೈನಲ್ಗೆ ಅರ್ಹತೆ ಪಡೆದವು. ಗುಂಪು ಹಂತದಲ್ಲಿ ಆಸ್ಟ್ರೇಲಿಯಾ ಅಜೇಯವಾಗಿ ಉಳಿದರೆ, ದಕ್ಷಿಣ ಆಫ್ರಿಕಾ 8 ಅಂಕಗಳೊಂದಿಗೆ ಎರಡನೇ ಸ್ಥಾನ ಮತ್ತು ಭಾರತ 6 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದವು. ಇದೀಗ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.

ನೋಡಿರಿ

