ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕೆಳಗಿಳಿಸಲು ಒತ್ತಾಯಿಸಿದ್ರಾ DVS? – ವೈರಲ್ ಆಡಿಯೋದಲ್ಲಿ ಏನಿದೆ?

ಬಿಜೆಪಿ ಪಾಳಯದಲ್ಲಿ ಆಡಿಯೋ ಬಾಂಬ್ ಸ್ಫೋಟವಾಗಿದೆ. ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ನಾಯಕಯತ್ವ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದೆ. ಇದಕ್ಕೆ ಪೂಕರವೆಂಬಂತೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನು ಕೆಳಗಿಳಿಸಲು ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿರುವ ಡಿವಿ ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ ಎಂದು ಇದರಲ್ಲಿ ಬೇಡಿಕೆ ಇಡಲಾಗಿದೆ. ಈ ಆಡಿಯೋ ಇದೀಗ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮತ್ತೆ ಬಣ ಬಡಿದಾಟ ಶುರುವಾಗಿದೆ.
ಇದನ್ನೂ ಓದಿ: ಕೋಚ್ & ಕ್ಯಾಪ್ಟನ್ COLD WAR – ಶ್ರೇಯಸ್-ಗಂಭೀರ್ ಟೀಂ ಮುಗಿಸಿದ್ರಾ?
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಇನ್ನು ಮೂರು ತಿಂಗಳಲ್ಲಿ ಮೂರು ವರ್ಷ ಪೂರೈಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮೂರು ವರ್ಷ ಇರುವುದು ಬಿಜೆಪಿಯಲ್ಲಿ ನಡೆದುಕೊಂಡು ಬಂದ ನಿಯಮವಾಗಿದೆ. ಇದೇ ಸಂದರ್ಭದಲ್ಲಿ ದೆಹಲಿ ಮಟ್ಟದ ನಾಯಕರೊಬ್ಬರ ಜೊತೆಗೆ ಡಿವಿ ಸದಾನಂದ ಗೌಡ ಅವರು ಮಾತನಾಡಿದ್ದಾರೆ ಎಂಬ ಆಡಿಯೋ ಹೊರಬಂದಿದ್ದು, ಡಿವಿ ಸದಾನಂದಗೌಡ ಅವರ ಧ್ವನಿಯನ್ನೇ ಹೋಲುವಂತಹ ಆಡಿಯೋ ಇದಾಗಿದೆ. ಹೀಗಾಗಿ ಸದ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ವರೆಗೂ ವಿಜಯೇಂದ್ರ ಮುಂದುವರೆಯಲು ಬಿಡಿ, ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂಬುವುದು ಆಡಿಯೋದಲ್ಲಿ ಉಲ್ಲೇಖವಾಗಿದೆ. ಈಗಲೇ ತೆಗೆದು ಹಾಕಿದ್ರೆ ಬಿಜೆಪಿ ಮತ್ತೆ ಲಿಂಗಾಯತ ವಿರೋಧಿ ಅಂತ ಟೀಕೆಗೆ ಗುರಿ ಆಗುವ ಅಪಾಯ ಇದೆ. ಇದು ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಹಾಗಾಗಿ ಮುಂದಿನ ಅಕ್ಟೋಬರ್ ವರೆಗೂ ಕಾದು ವಿಜಯೇಂದ್ರ ಅವರನ್ನು ಪದವಿಯಿಂದ ತೆಗೆಯುವಂತೆ ಮನವಿ ಮಾಡಲಾಗಿದೆ.

ನೋಡಿರಿ

