2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ರೆಡಿ – ಸಂಜು ಮತ್ತು ಅಭಿ ಓಪನರ್ಸ್?

2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ರೆಡಿ – ಸಂಜು ಮತ್ತು ಅಭಿ ಓಪನರ್ಸ್?

ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ T20 ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇವತ್ತು (ಶನಿವಾರ) ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಇಂಗ್ಲೆಂಡ್ ಈಗಾಗಲೇ ತನ್ನ ಆಡುವ ಹನ್ನೊಂದರ ಬಳಗ ಪ್ರಕಟಿಸಿದೆ. ಭಾರತದ ಸಂಭಾವ್ಯ ತಂಡದಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ವೈಭವ್ ಸೂರ್ಯವಂಶಿ ಬೆಂಚ್ ಕಾದಿದ್ದಕ್ಕೆ ಟೀಕೆ – ಮ್ಯಾನೇಜ್ಮೆಂಟ್ ನಿರ್ಧಾರಕ್ಕೆ ಬಿಸಿಸಿಐ ಸಮರ್ಥನೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಮ್ಯಾಂಚೆಸ್ಟರ್‌ನಲ್ಲಿನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ನಿರೀಕ್ಷೆ ಗರಿಗೆದರಿದೆ. ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಬ್ಯಾಟಿಂಗ್‌ ವಿಭಾಗದಲ್ಲಿ ಯಾವ ಬದಲಾವಣೆಯಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಆರಂಭಿಕ ಸಂಜು ಸ್ಯಾಮ್ಸನ್​ಗೆ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಆರಂಭಿಕರಾಗಿ ಸಂಜು ಮತ್ತು ಅಭಿಷೇಕ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್​ ಕಣಕ್ಕಿಳಿಯಲಿದ್ದಾರೆ. 4ನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬಂದರೆ, ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾಗೆ ಅವಕಾಶ ಸಿಗಲಿದೆ. ಯುವ ವೇಗಿ ಹರ್ಷಿತ್ ರಾಣಾ ಜೊತೆಗೆ ಅರ್ಷದೀಪ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು. ಆದರೆ ಎರಡನೇ ಟಿ20 ಪಂದ್ಯದಲ್ಲಿ ಮೂವರು ಸ್ಪಿನ್ನರ್‌ಗಳು ಆಡುವುದು ಅನುಮಾನ ಹೀಗಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್​ ಹನ್ನೊಂದರ ಬಳಗವನ್ನು ಸೇರಿಕೊಳ್ಳಲಿದ್ದಾರೆ. ವರುಣ್ ಚಕ್ರವರ್ತಿ ಆಡಲಿದ್ದಾರೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್/ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್.

Sulekha

Leave a Reply

Your email address will not be published. Required fields are marked *