ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಬಿಗ್ ಶಾಕ್ – ರಾಜ್ಯದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಬಿಗ್ ಶಾಕ್ –  ರಾಜ್ಯದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮತ್ತು ಪ್ರಿಯಾಂಕ್ ಖರ್ಗೆ ಫೈಟ್ ಮುಂದುವರಿದಿದೆ. RSSಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.  ರಾಜ್ಯದಲ್ಲಿ RSS ನವರು ಪಥಸಂಚಲನ ನಡೆಸಬೇಕು ಅಂದ್ರೆ ಅನುಮತಿ ಪಡೆದುಕೊಳ್ಳಲೇಬೇಕು. ನಾನು ಗೃಹ ಸಚಿವನಾಗಿ ಇರುವವರೆಗೂ ಕೂಡ ರಾಜ್ಯದಲ್ಲಿ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಮಳೆ ಅಬ್ಬರ – ಶಾಲಾ,ಕಾಲೇಜುಗಳಿಗೆ ರಜೆ, ರೈಲು ಸ್ಥಗಿತ, ವಿಮಾನ ಹಾರಾಟದಲ್ಲೂ ಅಡಚಣೆ

ನಾನು ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ ಎಂದು  ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದೇ ವೇಳೆ ಘಟನೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಂಬಲಿಗರು ನನ್ನ ವೈಯಕ್ತಿಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಪ್ರಿಯಾಂಕ್ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಯಾರನ್ನ ಮದುವೆಯಾಗಿದ್ದಾನೆ? ಆತನ ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ ಅಥವಾ ಬೆಳ್ಳಗಿದ್ದಾನಾ? ಎಂದು ಕೆದಕುತ್ತಿದ್ದಾರೆ. ಅವರು ಎಷ್ಟೇ ಕೆದಕಿದರೂ ನಾನು ಹೆದರುವ ವ್ಯಕ್ತಿಯಲ್ಲ. ನನ್ನ ಬಣ್ಣದ ಬಗ್ಗೆ ಮಾತನಾಡುವವರಿಗೆ ನನ್ನ ಕೆಲಸಗಳೇ ಉತ್ತರ ನೀಡುತ್ತವೆ ಎಂದು ಸವಾಲು ಹಾಕಿದ್ದಾರೆ.

Kishor KV

Leave a Reply

Your email address will not be published. Required fields are marked *