ಹವಾ ಎಬ್ಬಿಸಿದ ಟಾಕ್ಸಿಕ್‌ ತಬಾಹಿ ಲಿರಿಕಲ್ ಸಾಂಗ್ – ಯಶ್ ಮಾದಕ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ

ಹವಾ ಎಬ್ಬಿಸಿದ ಟಾಕ್ಸಿಕ್‌ ತಬಾಹಿ ಲಿರಿಕಲ್ ಸಾಂಗ್ – ಯಶ್ ಮಾದಕ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ

ಟಾಕ್ಸಿಕ್ ಕ್ರೇಜ್ ಹೆಚ್ಚಾಗಿದ್ದು, ಸಿನಿಮಾದ ಬಗ್ಗೆ ಟಾಕ್ ಜೋರಾಗಿದೆ.  ಈ ನಡುವೆ  ಸಿನಿಮಾದ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ‘ತಬಾಹಿ‘ ಲಿರಿಕಲ್ ಸಾಂಗ್ ಈಗಾಗಲೇ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ಸಖತ್ ಕಿಕ್ ಕೊಡ್ತಿದೆ.

ಯಶ್ ಹಾಗೂ ಕಿಯಾರಾ ಅಡ್ವಾಣಿ ಜೋಡಿಯ ಈ ರೊಮ್ಯಾಂಟಿಕ್ ಹಾಡು ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ. ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಕೆಮಿಸ್ಟ್ರಿ ಹೈಲೈಟ್ ಆಗಿದೆ. ಗ್ಯಾಂಗ್‌ಸ್ಟರ್ ಪ್ರೀತಿಯ ಕಥೆಯನ್ನು ಈ ಹಾಡಿನಲ್ಲಿ ರೊಮ್ಯಾಂಟಿಕ್ ಆಗಿ ತೋರಿಸಲಾಗಿದೆ.  ಲವ್ ಸಾಂಗ್‌ಗಿಂತ ಇದು ಸ್ವಲ್ಪ ಬೋಲ್ಡ್ ಆಗಿ ಮೂಡಿಬಂದಿದೆ.

ಇದನ್ನೂ ಓದಿ: ಕರಾವಳಿ ಸಿನಿಮಾ ಕಾದಾಟಕ್ಕೆ ಕಾರಣವೇನು? – ಪ್ರಜ್ವಲ್ ದೇವರಾಜ್ ದನಿಯಿಲ್ಲದೇ ಟ್ರೇಲರ್ ರಿಲೀಸ್ ಮಾಡಿದ್ಯಾಕೆ?

ಇದೇ ಮೊದಲ ಬಾರಿಗೆ ಯಶ್ ಇಂತಹ ಬೋಲ್ಡ್ ಆಗಿ ತೆರೆ ಮೇಲೆ ಕಾಣಿಸಿಕೊಂಡಿದ್ದು, ಇದು ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ತಬಾಹಿ  ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಹಾಡಿನ ದೃಶ್ಯ ವೈಭವ, ನೃತ್ಯ ಸಂಯೋಜನೆ ಮತ್ತು ಛಾಯಾಗ್ರಹಣ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ.

ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿವೆ.ಚಿತ್ರದಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಜೊತೆಗೆ ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಛಾಯಾಗ್ರಹಣ ಮಾಡಿದ್ದು, ರವಿ ಬಸ್ರೂರು ಸಂಗೀತ ನೀಡಿದ್ದಾರೆ.

Kishor KV