ಲಾರ್ಡ್ಸ್ ಅಂಗಳದಲ್ಲಿ ಮೊದಲ ಮಹಿಳಾ ಟೆಸ್ಟ್ ಪಂದ್ಯ – ಗೆಲುವಿಗಾಗಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೋರಾಟ

142 ವರ್ಷಗಳಲ್ಲಿ ಮೊದಲ ಬಾರಿಗೆ ಲಾರ್ಡ್ಸ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದಿದೆ. ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳು ನಡುವೆ ಲಾರ್ಡ್ಸ್‌ನಲ್ಲಿ ಏಕೈಕ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದ್ದು, ಗೆಲುವಿಗಾಗಿ ಟೀಂ ಇಂಡಿಯಾ ಭರ್ಜರಿ ಹೋರಾಟ ನಡೆಸುತ್ತಿದೆ. ಮಹಿಳಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ತೆ ಮಾಡಿಕೊಂಡಿದೆ. ಭಾರತ ಈಗಗಾಲೇ 65 ರನ್‌ಗೆ 2 ವಿಕೆಟ್ ಕಳೆದುಕೊಂಡಿದೆ.
ಇದನ್ನೂ ಓದಿ: ಟೀಂ ಇಂಡಿಯಾಗೆ ಸೋಲಲ್ಲ SHAME – ಫೈಟ್ ಕೊಡೋದನ್ನೂ ಮರೆತ ಭಾರತ!
ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉತ್ತಮ ದಾಖಲೆಯನ್ನು ಹೊಂದಿದೆ. ಕಳೆದ 31 ವರ್ಷಗಳಲ್ಲಿ ಭಾರತ ತಂಡ, ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಭಾರತ ಕೊನೆಯ ಬಾರಿಗೆ 1995 ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಸೋತಿತ್ತು. ಇದಾದ ನಂತರ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ 15 ಟೆಸ್ಟ್ ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ ತಂಡ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ಒಂದರಲ್ಲಿ ಸೋತಿದೆ. ಉಳಿದಂತೆ 11 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇಂಗ್ಲೆಂಡ್ ವಿರುದ್ಧದ ಕೊನೆಯ ನಾಲ್ಕು ಟೆಸ್ಟ್‌ಗಳಲ್ಲಿ ಭಾರತ ಮೂರರಲ್ಲಿ ಗೆದ್ದಿದ್ದು, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.
ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸಯಾಲಿ ಸತ್ಘರೆ, ಶ್ರೀ ಚರಣಿ (ಟೆಸ್ಟ್‌ಗೆ ಪಾದಾರ್ಪಣೆ) ಮತ್ತು ಕ್ರಾಂತಿ ಗೌಡ್.

ನೋಡಿರಿ

