ಪಬ್‌ನಲ್ಲಿ ಭೀಕರ ಅ*ಗ್ನಿ ದುರಂತ – 27 ಮಂದಿ ಸಾ*ವು, 63 ಜನರಿಗೆ ಗಾಯ

ಥೈಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನಲ್ಲಿ ಭಾನುವಾರ ಮಧ್ಯರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ಬ್ಯಾಂಕಾಕ್ ನಾ ಲಾಡ್ ಫಾವೋ ಪ್ರದೇಶದಲ್ಲಿರುವ ಪಬ್‌ನಲ್ಲಿ ಈ ದುರಂತ ಸಂಭವಿಸಿದ್ದು, ಗಾಯಾಳುಗಳಲ್ಲಿ 22 ಮಂದಿಯ ಸ್ಥಿತಿ ಗಂಭೀರವಾಗಿದೆ.
ಮಧ್ಯರಾತ್ರಿ ಸುಮಾರಿಗೆ ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಜ್ವಾಲೆಗಳು ಸಂಪೂರ್ಣ ಕಟ್ಟಡವನ್ನು ಆವರಿಸಿವೆ. ದಟ್ಟ ಹೊಗೆ ಕಟ್ಟಡದೊಳಗೆ ವೇಗವಾಗಿ ಹರಡಿದ ಪರಿಣಾಮ, ಒಳಗಿದ್ದವರು ಹೊರಬರಲು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು 30 ನಿಮಿಷಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಇದನ್ನೂ ಓದಿ: ಲವ್ ಮ್ಯಾರೇಜ್ ಆಗಿ ನಾಲ್ಕೇ ತಿಂಗಳಿಗೆ ನವವಿವಾಹಿತೆ ಸೂ*ಸೈಡ್ – ಗಂಡನ ಮನೆಯಲ್ಲಿ ಆಗಿದ್ದೇನು?
ಈ ದುರಂತಕ್ಕೆ ನಿಖರವಾದ ಕಾರಣದ ಕುರಿತು ತನಿಖೆ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ, ಆದರೆ, ಪಬ್‌ನಲ್ಲಿ ಪ್ರದರ್ಶನ ನೀಡುತ್ತಿದ್ದ ಸಂಗೀತಗಾರನೊಬ್ಬ ವೇದಿಕೆಯ ಬಳಿಯಿದ್ದ ಸರ್ಕ್ಯೂಟ್ ಬ್ರೇಕರ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದೆ. ವಿದ್ಯುತ್ ಕಡಿತಗೊಳ್ಳುವ ಮೊದಲು ಹಾಗೂ ನಂತರ ಸ್ಫೋಟದ ಶಬ್ದ ಕೇಳಿಸಿತು ಮತ್ತು ದಟ್ಟವಾದ ಹೊಗೆ ಬೇಗನೆ ಸ್ಥಳವನ್ನು ತುಂಬಿತು ಎಂದು ಹೇಳಿದ್ದಾರೆ.
ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಮಾತನಾಡಿ, ಬೆಂಕಿ ಅತ್ಯಂತ ವೇಗವಾಗಿ ಮೇಲ್ಮಾವಣಿಯವರೆಗೆ ಹರಡಿತ್ತು ಎಂದು ತಿಳಿಸಿದ್ದಾರೆ. ಬೆಂಕಿಗಿಂತ ದಟ್ಟ ಹೊಗೆಯಿಂದ ಉಸಿರುಗಟ್ಟಿದ ಪರಿಣಾಮವೇ ಹೆಚ್ಚಿನ ಸಾವುಗಳು ಸಂಭವಿಸಿರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದರು.
ಘಟನೆ ನಡೆದ ವೇಳೆ ಪಬ್ ನಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ನೋಡಿರಿ

