ಮನೆಯಲ್ಲಿ ಹೆಂಡ್ತಿ , ಹೊಲದಲ್ಲಿ ಗಂಡ ಆತ್ಮಹ*ತ್ಯೆ – ಸಾವಿನ ಮನೆ ಸೇರಿದ ನಾಲ್ಕು ತಿಂಗಳ ಹಿಂದೆ ಮದುವೆಯಾದ ನವಜೋಡಿ

ಮನೆಯಲ್ಲಿ ಹೆಂಡ್ತಿ , ಹೊಲದಲ್ಲಿ ಗಂಡ ಆತ್ಮಹ*ತ್ಯೆ – ಸಾವಿನ ಮನೆ ಸೇರಿದ ನಾಲ್ಕು ತಿಂಗಳ ಹಿಂದೆ ಮದುವೆಯಾದ ನವಜೋಡಿ

ನವದಂಪತಿ ಒಂದೇ ದಿನ ಪ್ರಾಣ ಬಿಟ್ಟಿ ಘಟನೆ ತುಮಕೂರಿನಲ್ಲಿ ನಡೆದಿದೆ.  ಕೇವಲ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದ  ನವದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹವಾದ ನವ ದಂಪತಿ ನೇಣಿಗೆ ಶರಣಾಗಿದ್ದಾರೆ. ಹೆಂಡ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ರೆ, ಅತ್ತ ಹೊಲದಲ್ಲಿ ಗಂಡ ನೇಣಿಗೆ ಶರಣಾಗಿದ್ದಾನೆ.

ಈ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಶರಣ್ಯ ಮತ್ತು 28 ವರ್ಷದ ಗಿರೀಶ್ ಈ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಇವರ ಮದುವೆಯಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪತ್ನಿ ಶರಣ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಪತಿ ಗಿರೀಶ್ ಹೊಲದ ಹತ್ತಿರ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ದುರಂತ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಇಬ್ಬರು ಒಂದೇ ದಿನ ಕೆಲವೇ ಗಂಟೆಗಳ ಅಂತರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಲವ್ ಮ್ಯಾರೇಜ್ ಆಗಿ ನಾಲ್ಕೇ ತಿಂಗಳಿಗೆ ನವವಿವಾಹಿತೆ ಸೂ*ಸೈಡ್ – ಗಂಡನ ಮನೆಯಲ್ಲಿ ಆಗಿದ್ದೇನು?

ಆತ್ಮಹತ್ಯೆಗೆ ನಿಖರ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ. ವೈಯಕ್ತಿಕ ಸಮಸ್ಯೆ ಇತ್ತಾ ಅನ್ನೋಬ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಪಟ್ಟನಾಯಕನಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಿಸಲಾಗಿದೆ.

Kishor KV

Leave a Reply

Your email address will not be published. Required fields are marked *