ಇಂದಿನಿಂದ ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ – RO-KO ಆಟ ನೋಡುವುದ್ದಕ್ಕೆ ಫ್ಯಾನ್ಸ್ ಕಾತುರ

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ ಇಂದು ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಒಟ್ಟಿಗೆ ಆಡುತ್ತಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.
ಇದನ್ನೂ ಓದಿ: IND ಅಲ್ಲ ENGಗೆ ದ್ರಾವಿಡ್ COACH? – TOSS ಗೆದ್ರೂ ಮ್ಯಾಚ್ ಗೆಲ್ಲದ ಶ್ರೇಯಸ್
ಇಂಗ್ಲೆಂಡ್ ನೆಲದಲ್ಲಿ 8 ಆಟಗಾರರಿಗೆ ಮೊದಲ ODI
ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ, ಪ್ರಿನ್ಸ್ ಯಾದವ್ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್ ನೆಲದಲ್ಲಿ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಇದರಲ್ಲಿ ಕೆಲವು ಆಟಗಾರರಿ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಇಂಗ್ಲೆಂಡ್ ನೆಲದಲ್ಲಿ ಆಡಿಲ್ಲ. ಇನ್ನು ಕೆಲವರು ಇಂಗ್ಲೆಂಡ್ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನಾಡಿದ್ದಾರೆ. ಆದರೆ ಏಕದಿನ ಸರಣಿಯನ್ನು ಆಡಿಲ್ಲ. ಹೀಗಾಗಿ ಈ ಎಲ್ಲಾ ಆಟಗಾರರಿಗೆ ಇಂಗ್ಲೆಂಡ್ ನೆಲದಲ್ಲಿ ಮೊದಲ ಏಕದಿನ ಸರಣಿ ಇದಾಗಲಿದೆ.
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ನೋಡಿರಿ

