ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ – ಭಾರತಕ್ಕೆ RO-KO, ರಾಹುಲ್ ಬಲ

ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದಿದೆ. ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಹ್ಲಿ ಮತ್ತು ರೋಹಿತ್ ಜೊತೆಗೆ ದೇಶದ ಅಗ್ರ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ, ನಾಯಕ ಶುಭಮನ್ ಗಿಲ್, ವಿಕೆಟ್ ಕೀಪರ್–ಬ್ಯಾಟರ್ ಕೆ.ಎಲ್.ರಾಹುಲ್ ಅವರೂ ಭಾರತ ತಂಡಕ್ಕೆ ಮರಳಿದ್ದಾರೆ. ಇದು ಸಹಜವಾಗಿಯೇ ತಂಡವನ್ನು ಬಲಿಷ್ಠಗೊಳಿಸಿದೆ.
ಇದನ್ನೂ ಓದಿ: RO-KO ಫೈಯರ್.. ಬುಮ್ರಾ ಪವರ್ – ENGನಲ್ಲಿ ತ್ರಿಮೂರ್ತಿಗಳದ್ದೇ ಕಾರುಬಾರು
ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿದೆ. ಟಿ20 ಸರಣಿಯಲ್ಲಿನ ಹೀನಾಯ ಸೋಲನ್ನು ಎದುರಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತಿದೆ. ಹಾಗೆಯೇ 2027 ರ ಏಕದಿನ ವಿಶ್ವಕಪ್ಗೆ ಭಾರತದ ಸಿದ್ಧತೆಗೂ ಈ ಸರಣಿ ನಿರ್ಣಾಯಕವಾಗಿದೆ. ಈ ಸರಣಿಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.
ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇಂಗ್ಲೆಂಡ್ ತಂಡ ಒಂದು ದಿನ ಮೊದಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿತ್ತು. ಇದೀಗ ಟೀಂ ಇಂಡಿಯಾದ ಪ್ಲೇಯಿಂಗ್ ಕೂಡ ಹೊರಬಿದ್ದಿದೆ.

ನೋಡಿರಿ

