ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಂ ಇಂಡಿಯಾ

ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಇದರ ಜೊತೆಗೆ ಇಂಗ್ಲೆಂಡ್ ಪ್ರವಾಸದಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 258 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕದ ನೆರವಿನಿಂದ 45.2 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಇದನ್ನೂ ಓದಿ: ENG ಬೆವರಿಳಿಸಿದ ಬುಮ್ರಾ, ಬ್ರಾರ್ – ಇದು ಭಾರತದ ಅಸಲಿ ಬೌಲಿಂಗ್ ಕಿಚ್ಚು
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿತು. ಆರಂಭಿಕರಾದ ಬೆನ್ ಡಕೆಟ್ (43) ಹಾಗೂ ಜಾಕೊಬ್ ಬೆಥೆಲ್ (14) ಜೋಡಿ ಮೊದಲ ವಿಕೆಟ್‌ಗೆ 12.2 ಓವರ್‌ಗಳಲ್ಲಿ 61 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಆದರೆ ಈ ಇಬ್ಬರೂ ಆಟಗಾರರು ಬಿಗ್ ಇನಿಂಗ್ಸ್ ಕಟ್ಟಲಿಲ್ಲ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ (1), ಜೋಸ್ ಬಟ್ಲರ್ (5), ಸ್ಯಾಮ್ ಕರನ್ (0), ವಿಲ್ ಜಾಕ್ಸ್ (20) ರನ್ ಕಲೆ ಹಾಕುವಲ್ಲಿ ವಿಫಲರಾದರು. ಒಂದು ಹಂತದಲ್ಲಿ ಇಂಗ್ಲೆಂಡ್ 107 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ರೂಟ್, ಡಾಸನ್ ಶತಕದ ಜೊತೆಯಾಟ ಈ ಹಂತದಲ್ಲಿ ತಂಡಕ್ಕೆ ಭರವಸೆಯ ಆಟಗಾರ ಜೋ ರೂಟ್ ಹಾಗೂ ಲಿಯಾಮ್ ಡಾಸನ್ ಜೋಡಿ ಆಧಾರವಾಯಿತು. ಈ ಜೋಡಿ ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾಯಿತು. ಈ ಜೋಡಿ 134 ಎಸೆತಗಳಲ್ಲಿ 121 ರನ್ ಸೇರಿಸಿತು. ಈ ವೇಳೆ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 68 ರನ್ ಬಾರಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. ಸ್ಟಾರ್ ಆಟಗಾರ ಜೋ ರೂಟ್ 76 ಎಸೆತಗಳಲ್ಲಿ ಅಜೇಯ 76 ರನ್ ಸೇರಿಸಿತು. ಅಂತಿಮವಾಗಿ ಇಂಗ್ಲೆಂಡ್ 47.5 ಓವರ್‌ಗಳಲ್ಲಿ 258 ರನ್ ಸೇರಿಸಿ ಆಲೌಟ್ ಆಯಿತು. ಭಾರತದ ಪರ ಅಕ್ಷರ್ ಪಟೇಲ್ 4, ಪ್ರಸಿದ್ಧ್ ಕೃಷ್ಣ ಹಾಗೂ ಗುರ್ನೂರ್ ಬ್ರಾರ್ ತಲಾ ಎರಡು ವಿಕೆಟ್ ಪಡೆದರು.
ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ರೋಹಿತ್ ಶರ್ಮಾ 11 ರನ್‌ಗಳಿಗೆ ಔಟಾದರೆ, ಆ ನಂತರ ಬಂದ ವಿರಾಟ್ ಕೊಹ್ಲಿ ಕೂಡ ಕೇವಲ 5 ರನ್‌ಗಳಿಗೆ ಔಟಾದರು. ಇಲ್ಲಿಂದ ಜೊತೆಯಾದ ನಾಯಕ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟ ಕಟ್ಟಿದರು. ಇದೇ ವೇಳೆ ನಾಯಕ ಗಿಲ್ ಅರ್ಧಶತಕದ ಗಡಿ ಕೂಡ ದಾಟಿದರು. ಅದ್ಭುತ ಇನ್ನಿಂಗ್ಸ್ ಕಟ್ಟುತ್ತಾ ಶತಕದಗತ್ತ ಸಾಗುತ್ತಿದ್ದ ಗಿಲ್ ಗಾಯದಿಂದಾಗಿ ಅರ್ಧಕ್ಕೆ ಬ್ಯಾಟಿಂಗ್ ನಿಲ್ಲಿಸಿ ರಿಟೈಡ್ ಹರ್ಟ್ ಆಗಿ ಡಗೌಟ್ ಸೇರಿಕೊಂಡರು. ಈ ಹಂತದಲ್ಲಿ ಗಿಲ್ 80 ರನ್ ಬಾರಿಸಿದ್ದರು. ಅಂತಿಮವಾಗಿ ಟೀಂ ಇಂಡಿಯಾ ಗೆಲುವಿನ ಖಾತೆ ತೆರೆಯಿತು.

ನೋಡಿರಿ

