ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ – ಯಾವ್ಯಾವ ವಾಹನಗಳಿಗೆ ನಿರ್ಬಂಧ, ಎಲ್ಲೆಲ್ಲಿ ಮಾರ್ಗ ಬದಲಾವಣೆ..!?

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ – ಯಾವ್ಯಾವ ವಾಹನಗಳಿಗೆ ನಿರ್ಬಂಧ, ಎಲ್ಲೆಲ್ಲಿ ಮಾರ್ಗ ಬದಲಾವಣೆ..!?

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯ ದಿನಗಳಲ್ಲೇ ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡುತ್ತಾರೆ. ಅಂಥಾದ್ರಲ್ಲಿ ಪ್ರಧಾನಿ ಮೋದಿ ಬರ್ತಾರೆ ಅಂದ್ರೆ ಕೇಳ್ಬೇಕಾ. ಹೀಗಾಗೇ ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಟ್ರಾಫಿಕ್ ರೂಲ್ಸ್​ನಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ : ಎಂಎಸ್ ಧೋನಿ ಶಾಲೆಗೆ ಕರ್ನಾಟಕ ಶಿಕ್ಷಣ ಇಲಾಖೆ ನೋಟಿಸ್ – ಏನಿದು ಸಿಬಿಎಸ್​ಇ ವಿವಾದ..!?

ಪ್ರಧಾನಿ ನರೇಂದ್ರ ಮೋದಿ ನಾಳೆ (ಫೆ.4) ಬೆಂಗಳೂರಿಗೆ ಆಗಮಿಸುತ್ತಿದ್ದು, ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 5 ರಿಂದ 8 ರವರೆಗೆ ಮೂರು ದಿನ ಕಾರ್ಯಕ್ರಮ ನಡೆಯಲಿದ್ದು, ನಾಳೆ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ದೇಶ ವಿದೇಶದಿಂದ ಗಣ್ಯರು ಆಗಮಿಸುವ ನಿರೀಕ್ಷೆಗಳಿವೆ. ಇದರ ಜೊತೆ ಪ್ರಧಾನಿಗಳ ಭದ್ರತೆ ಹಿನ್ನೆಲೆ ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ವಿಶೇಷವಾಗಿ ಬೆಂಗಳೂರು -ತುಮಕೂರು ರಸ್ತೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಯಾವ್ಯಾವ ಮಾರ್ಗದಲ್ಲಿ ಬರುವ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ ಅನ್ನೋ ಮಾಹಿತಿ ಇಲ್ಲಿದೆ.

– ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳ ನಿರ್ಬಂಧ

– ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ

– ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ

– ಹೊಸಕೋಟೆ ರಸ್ತೆಯಿಂದ ಹೆಬ್ಬಾಳದವರೆಗೆ

ಮೂರು ದಿನ ಭಾರಿ ಸರಕು ಸಾಗಣೆ ವಾಹನಗಳ ನಿರ್ಬಂಧದ ಜೊತೆ ಬದಲಿ ಮಾರ್ಗವನ್ನೂ ಸೂಚಿಸಲಾಗಿದೆ. ಅದರ ವಿವರ ಇಲ್ಲಿದೆ.

– ತುಮಕೂರು ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆ ಸಂಚರಿಸಬೇಕು.

-ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್​ನಲ್ಲಿ ಬಲ ತಿರುವು ಪಡೆದು ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆ ಸಂಚರಿಸಬೇಕು.

-ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಸಂಪರ್ಕ ಪಡೆಯುವುದು.

-ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಕಡೆ ಸಂಚಾರ ಮಾಡಬಹುದು.

 

suddiyaana