ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳ ದುರಂತ ಅಂತ್ಯ!

ವಿಜಯಪುರದ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ:ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ- ಯಶವಂತಪುರ TO ಮಾದಾವರ ನಡುವಿನ 10 ಸ್ಟೇಷನ್ಗಳಲ್ಲಿ ಮೆಟ್ರೋ ಸೇವೆ ಸ್ಥಗಿತ
ಟ್ರ್ಯಾಕ್ಟರ್ ನಲ್ಲಿ ಕಬ್ಬು ಕಟಾವಿಗೆ ತೆರಳುತ್ತಿದ್ದ ಕಾರ್ಮಿಕರಿಗೆ ಈ ಅಪಘಾತವಾಗಿದ್ದು, ಈ ಭೀಕರ ದುರಂತದಲ್ಲಿ ತಂದೆ-ಮಗಳು ಪ್ರಾಣ ಬಿಟ್ಟಿದ್ದಾರೆ. ತಂದೆ ಗೌರೀಶ್ ಲೋಧಿ (25) ಮಗಳು ಪ್ರಿಯಾಂಕಾ (3) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ನಿಡಗುಂದಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ದೇಹಗಳನ್ನ ಕೂಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬೊಲೆರೋ ಹಾಗೂ ಲಾರಿ ನಡುವೆ ಡಿಕ್ಕಿ
ಮತ್ತೊಂದ್ಕಡೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹುಳುವಿನಾಳ್ ಬಳಿ ಬೊಲೆರೋ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರು ಕಡೆಯಿಂದ ಬರ್ತಿದ್ದ ಲಾರಿ ಎದುರುಗಡೆ ಬರುತ್ತಿದ್ದ ಬುಲೆರೋಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆದಿದೆ.

ನೋಡಿರಿ

