ನೀಟ್ ಪ್ರಶ್ನೆ ಪತ್ರಿಕೆ ಅಕ್ರಮದ ಬಗ್ಗೆ ಮೋದಿ ಮಹ್ವದ ಘೋಷಣೆ – ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧಾರ

ನೀಟ್ ಪ್ರಶ್ನೆ ಪತ್ರಿಕೆ ಅಕ್ರಮದ ಬಗ್ಗೆ ಮೋದಿ ಮಹ್ವದ ಘೋಷಣೆ – ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ  ಜೋರಾದ ಬೆನ್ನಲ್ಲೇ ಸಂಸತ್ತಿನಲ್ಲಿ ನಡೆದ ಗದ್ದಲ ಕೂಡ ಹೆಚ್ಚಿದೆ. ಈ ನಡುವೆ ನೀಟ್‌ ವಿವಾದ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ಸರ್ಕಾರ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಅಂತ ಮೋದಿ ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರನ್ನು ಕಾನೂನಿನ ಮುಂದೆ ತಂದು ಶಿಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಹಲವು ಕ್ರಮಗಳ ಸರಣಿಯ ಭಾಗ ಇದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಉರುಳಿದ ಮರ – ಉಸಿರು ನಿಲ್ಲಿಸಿದ ಪುಟ್ಟ ಬಾಲಕಿ

“ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಬಿಡುವುದಿಲ್ಲ” ಎಂದು ಪ್ರಧಾನಿ ಭರವಸೆ ನೀಡಿದರು. ಸಾಮಾಜಿಕ ಮಾಧ್ಯಮ ವೇದಿಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡುವಂತೆ ಬೇಡಿಕೆಗಳ ಮಧ್ಯೆ ಪ್ರಧಾನಿ ಮೋದಿಯವರ ಈ ಘೋಷಣೆ ಹೊರಬಿದ್ದಿದೆ.

Kishor KV