SIR ಕರ್ತವ್ಯದಲ್ಲಿದ್ದ BLO ಶಿಕ್ಷಕಿ ಶಮಂತಾಕುಮಾರಿ ಹೃದಯಾಘಾತದಿಂದ ನಿಧನ

SIR ಕರ್ತವ್ಯದಲ್ಲಿದ್ದ BLO ಶಿಕ್ಷಕಿ ಶಮಂತಾಕುಮಾರಿ ಹೃದಯಾಘಾತದಿಂದ ನಿಧನ

SIR ಒತ್ತಡದಿಂದ  ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ.  ಬೆಂಗಳೂರಿನ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಶಮಂತಾಕುಮಾರಿ ಮೃತ ಶಿಕ್ಷಕಿ.  ಇತ್ತೀಚೆಗಷ್ಟೇ ಇವರನ್ನು SIR ಪ್ರಕ್ರಿಯೆಯ ಬಿಎಲ್‌ಒ ಡ್ಯೂಟಿಗೆ ನಿಯೋಜಿಸಲಾಗಿತ್ತು.  ಅದೇ ಒತ್ತಡದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮದುವೆ ದಿನವೇ ಕೈಕೊಟ್ಟು ಓಡಿ ಹೋದ ಪಿಂಕಿ – ಗುಂಡಮ್ಮನ ಹತ್ರ ಓಡಿಬರ್ತಾನಾ ಜಿಮ್ ಸೀನ?

SIR ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸುವಂತೆ ಮೇಲಾಧಿಕಾರಿಗಳು ತೀವ್ರ ಒತ್ತಡ ಹೇರುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನನಗೆ ಈ ಕೆಲಸದಿಂದ ತೀವ್ರ ಒತ್ತಡವಾಗುತ್ತಿದೆ, ಈ ಕೆಲಸದಿಂದ ನನ್ನನ್ನು ಬಿಡುಗಡೆ ಬೇಕು ಎಂದು ಮೃತ ಶಿಕ್ಷಕಿ ಶಮಂತಾಕುಮಾರಿ ಅವರು ತಮ್ಮ ಕುಟುಂಬದವರ ಬಳಿ ಅಳಲು ತೋಡಿಕೊಂಡಿದ್ದರಂತೆ.

ಕೆಲಸದ ಒತ್ತಡದಿಂದಾಗಿ ಅವರಲ್ಲಿ ರಕ್ತದೊತ್ತಡ  ಮತ್ತು ಸಕ್ಕರೆ ಕಾಯಿಲೆ  ಪ್ರಮಾಣ ಹೆಚ್ಚಾಗಿ, ತೀವ್ರ ಜ್ವರ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಇದೇ ರೀತಿಯ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ  ಪ್ರಕ್ರಿಯೆಯ ಕರ್ತವ್ಯದ ವೇಳೆಯಲ್ಲಿಯೇ ಮುಂಚೆ ಮತ್ತೊಂದು ದುರಂತ ಸಂಭವಿಸಿತ್ತು. SIR ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ ಭುವನಾ ಚಿಕಿತ್ಸೆ ಫಲಿಸದೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ   ಕೊನೆಯುಸಿರೆಳೆದಿದ್ದರು. ಅಂದು ಬೆಳಿಗ್ಗೆ ತುಮಕೂರು ತಾಲೂಕಿನ ಗೂಳೂರು ಬಳಿ ಬೈಕ್‌ನಲ್ಲಿ ಎಸ್‌ಐಆರ್ ಪ್ರಕ್ರಿಯೆಯ ವಿಎಒ ಸೂಪರ್‌ವೈಸರ್ ಆಗಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತ್ತು.

Kishor KV

Leave a Reply

Your email address will not be published. Required fields are marked *