ಪ್ರವಾಹದಲ್ಲಿ ಕೊಚ್ಚಿ ಹೋದ ಅಸ್ಸಾಂ ಜನರ ಬದುಕು – 69 ಸಾ*ವು, ಬೀದಿಗೆ ಬಿದ್ದ 4.45 ಲಕ್ಷ ಜನ

ಪ್ರವಾಹದಲ್ಲಿ ಕೊಚ್ಚಿ ಹೋದ ಅಸ್ಸಾಂ ಜನರ ಬದುಕು – 69 ಸಾ*ವು, ಬೀದಿಗೆ ಬಿದ್ದ 4.45 ಲಕ್ಷ ಜನ

 

ಅಸ್ಸಾಂ ಪ್ರವಾಹದಿಂದ ಲಕ್ಷಾಂತರ ಜನ ಬೀದಿಗೆ ಬಿದ್ದಿದ್ದಾರೆ. ಅಸ್ಸಾಂನಲ್ಲಿ ಸದ್ಯಕ್ಕೆ ಪ್ರವಾಹ ಪರಿಸ್ಥಿತಿ   ಸುಧಾರಿಸಿದ್ದು, ಕಳೆದ 24 ಗಂಟೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಅಸ್ಸಾಂನ  6 ಜಿಲ್ಲೆಗಳ ಸುಮಾರು 4.45 ಲಕ್ಷಕ್ಕೂ ಹೆಚ್ಚು ಮಂದಿ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ: ಮೋದಿ ವಿಡಿಯೋ ಡಿಲೀಟ್ ಮಾಡಿದ ಫೇಸ್‌ಬುಕ್ – ಮೆಟಾ ಅಧಿಕಾರಿಗಳಿಗೆ ಸಮನ್ಸ್ ಜಾರಿ

ASDMA ಬಿಡುಗಡೆ ಮಾಡಿದ ವರದಿ, ಶಿವಸಾಗರ್, ಗೋಲಾಘಾಟ್, ಚರೈದಿಯೋ, ಜೋರ್ಹಾಟ್, ನಾಗಾಂವ್ ಹಾಗೂ ಕಾಮರೂಪ್ (ಮೆಟ್ರೋಪಾಲಿಟನ್) ಜಿಲ್ಲೆಗಳ ಒಟ್ಟು 4,45,495 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋಲಾಘಾಟ್ ಜಿಲ್ಲೆಯ ನುಮಾಲಿಗಢದಲ್ಲಿ ಧನಸಿರಿ (ದಕ್ಷಿಣ) ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇನ್ನೂ  ಜು.26 ರ ತನಕ 5 ಜಿಲ್ಲೆಗಳ 5.24 ಲಕ್ಷಕ್ಕೂ ಹೆಚ್ಚು ಜನ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದರು. ಆದ್ರೆ  ಸೋಮವಾರ ಯಾವುದೇ ಸಾವು  ನೋವಿನ ವರದಿಯಾಗಿಲ್ಲ. ಈ ವರ್ಷ ಅಸ್ಸಾಂನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಪ್ರಸ್ತುತ 90 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿದ್ದು, 28,695 ಸ್ಥಳಾಂತರಗೊಂಡ ಜನರಿಗೆ ಆಶ್ರಯ ಒದಗಿಸಲಾಗಿದೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಸೇರಿದಂತೆ ಹಲವಾರು ಸಂಸ್ಥೆಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಪೀಡಿತ ಪ್ರದೇಶಗಳಲ್ಲಿ 67 ದೋಣಿಗಳನ್ನು ನಿಯೋಜಿಸಲಾಗಿದೆ

Kishor KV

Leave a Reply

Your email address will not be published. Required fields are marked *