ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 15 ಪದಕಗಳು – ಅಥ್ಲೆಟಿಕ್ಸ್ ನಲ್ಲಿ ಕ್ರೀಡಾಪಟುಗಳ ವಿಶೇಷ ಸಾಧನೆ

2026ರ ಕಾಮನ್‌ವೆಲ್ತ್ ಗೇಮ್ಸ್‌ನ 6ನೇ ದಿನವು ಭಾರತದ ಪದಕ ಬೇಟೆ ಮುಂದುವರೆದಿದೆ. ಅದರಲ್ಲೂ ಆರನೇ ದಿನ ಭಾರತದ ಪರ ಮಿಂಚಿದ್ದು ಅಥ್ಲೆಟಿಕ್ಸ್ ಮತ್ತು ಪ್ಯಾರಾ ಅಥ್ಲೆಟಿಕ್ಸ್ ಕ್ರೀಡಾಪಟುಗಳು.
ಇದನ್ನೂ ಓದಿ:ಬ್ರ್ಯಾಂಡ್ ವ್ಯಾಲ್ಯೂನಲ್ಲೂ RCBಯೇ ಬಾಸ್ – ಧೋನಿ ಇಲ್ಲದೆ ಜಾರಿ ಬಿತ್ತು CSK
ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನ 6ನೇ ದಿನ ಭಾರತೀಯ ಕ್ರೀಡಾಪಟುಗಳು ಮೂರು ಪದಕಗಳನ್ನು ಗೆದ್ದಿದ್ದಾರೆ. ಪ್ಯಾರಾ ಟ್ರ್ಯಾಕ್‌ನಲ್ಲಿ ದಿಲೀಪ್ ಮಹಾದು ಗಾವಿತ್ ಚಿನ್ನ ಗೆದ್ದರೆ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಇನ್ನು ಲಾಂಗ್ ಜಂಪ್‌ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಪುರುಷರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಅಥ್ಲೀಟ್ ದಿಲೀಪ್ ಮಹಾದು ಗಾವಿತ್ ಕೇವಲ 10.71 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತನ್ನದಾಗಿಸಿಕೊಂಡರು. ಕಾಮನ್‌ವೆಲ್ತ್ ಗೇಮ್ಸ್ ಇತಿಹಾಸದಲ್ಲೇ ಈ ನಿರ್ದಿಷ್ಟ ವಿಭಾಗದಲ್ಲಿ ಇದುವರೆಗೆ ಯಾವುದೇ ಕ್ರೀಡಾಪಟು 10.71 ಸೆಕೆಂಡುಗಳಷ್ಟು ವೇಗವಾಗಿ ಓಡಿ ಗುರಿ ತಲುಪಿಲ್ಲ. ಇದೇ ರೇಸ್‌ನಲ್ಲಿ ಭಾರತದ ಮತ್ತೊಬ್ಬ ಪ್ರತಿಭಾವಂತ ಓಟಗಾರ ಮೊಹಮ್ಮದ್ ಬಾಸಿಲ್ ಎಂ 10.83 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿಯ ಪದಕವನ್ನು ತನ್ನದಾಗಿಸಿಕೊಂಡರು. ಈ ಮೂರು ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಭಾರತವು 8ನೇ ಸ್ಥಾನದಲ್ಲಿದೆ. ಈವರೆಗೆ 3 ಚಿನ್ನ, 9 ಬೆಳ್ಳಿ, 3 ಕಂಚು ಪದಕಗಳನ್ನು ಭಾರತದ ಗೆದ್ದಿದೆ.

ನೋಡಿರಿ

