ಚುನಾವಣಾ ಹೊಸ್ತಿಲಲ್ಲೇ ಪ್ರಧಾನಿ ಮೋದಿ ರೌಂಡ್ಸ್ – ಬಿಜೆಪಿ ನಾಯಕರಿಗೆ ‘ಬೂಸ್ಟರ್’ ಡೋಸ್!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣಾ ಕಾವು ಜೋರಾಗುತ್ತಿದೆ. ಪಕ್ಷಗಳೂ ಕೂಡ ಈಗಾಗ್ಲೇ ಹತ್ತಾರು ಕಸರತ್ತು ಶುರು ಮಾಡಿವೆ. ಎಲೆಕ್ಷನ್ ಹೊಸ್ತಿಲಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಹಾಗೂ ತುಮಕೂರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿಯ ಭೇಟಿ ರಾಜ್ಯ ಬಿಜೆಪಿ ನಾಯಕರದಲ್ಲಿ ಹೊಸ ಹುಮ್ಮಸ್ಸು ತಂದಿದೆ.
ಇದನ್ನೂ ಓದಿ : ಸರ್ಕಾರದ ವಿರುದ್ಧ ಮತ್ತೆ ಮೊಳಗಿತು ಕಹಳೆ – ಸಾರಿಗೆ, ಆರೋಗ್ಯ ಇಲಾಖೆ ನೌಕರರ ಬೇಡಿಕೆಗಳೇನು..!?
ವಾಯುಪಡೆ ವಿಮಾನದಲ್ಲಿ ನವದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಮೋದಿ ಬಳಿಕ ಹೆಲಿಕಾಪ್ಟರ್ ಮೂಲಕ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಹೆಲಿಪ್ಯಾಡ್ಗೆ ತೆರಳಿದ್ದಾರೆ. ಇಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಇಂದನ ಸಪ್ತಾಯ ಉದ್ಘಾಟನೆ ಮಾಡಿದ್ದಾರೆ. ಮಧ್ಯಾಹ್ನದ 2.30ರವರೆಗೂ ಇಂಡಿಯಾ ಎನರ್ಜಿ ವೀಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ತುಮಕೂರಿಗೆ ತೆರಳಲಿದ್ದಾರೆ. ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ದೃಷ್ಟಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನ ಲೋಕಾರ್ಪಣೆ ಮಾಡಲಿದ್ದಾರೆ. ಇದಾದ ನಂತರ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾನ್ನ ಭಾಗವಾದ ತುಮಕೂರು ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ್ ಜೀವನ್ ಅಭಿಯಾನದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಂಜೆ 4.30ರವರೆಗೂ ತುಮಕೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಮೋದಿ ಬಳಿಕ ಹೆಲಿಕಾಪ್ಟರ್ ಮೂಲಕ ತುಮಕೂರಿನಿಂದ ಹೊರಟು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಇಲ್ಲಿಂದ ವಾಯುಪಡೆ ವಿಮಾನದ ಮೂಲಕ ನವದೆಹಲಿಗೆ ವಾಪಸ್ ಆಗಲಿದ್ದಾರೆ.