ವಿವೇಕ ಸ್ಮಾರಕ ಉದ್ಘಾಟನೆಗೆ ಮೈಸೂರಿಗೆ ಮೋದಿ ಎಂಟ್ರಿ – ಅರಮನೆ ನಗರಿಯಲ್ಲಿ ಹೈ ಅಲರ್ಟ್

ವಿವೇಕ ಸ್ಮಾರಕ ಉದ್ಘಾಟನೆಗೆ ಮೈಸೂರಿಗೆ ಮೋದಿ ಎಂಟ್ರಿ –  ಅರಮನೆ ನಗರಿಯಲ್ಲಿ ಹೈ ಅಲರ್ಟ್

1892ರಲ್ಲಿ ಮೈಸೂರಿಗೆ ಸ್ವಾಮಿ ವಿವೇಕಾನಂದರು ಭೇಟಿ ನೀಡಿದ್ದ ಸ್ಥಳ ಇದೀಗ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ-ವಿವೇಕ ಸ್ಮಾರಕವಾಗಿ ನಿರ್ಮಾಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ  ಮಾಡಲಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೈಸೂರು ಭೇಟಿಗೆ ನಗರ ಸಂಪೂರ್ಣ ಸಜ್ಜಾಗಿದೆ.  ಅಧಿಕೃತ ಕಾರ್ಯಕ್ರಮದ ವೇಳಾಪಟ್ಟಿಯ ಪ್ರಕಾರ, ಪ್ರಧಾನ ಮಂತ್ರಿಗಳು ಮಧ್ಯಾಹ್ನ 2.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ತೆರಳಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ರಾಮಕೃಷ್ಣ ಆಶ್ರಮ ಶಾಲೆಗೆ ಭೇಟಿ ನೀಡಿ, ಸಂಜೆ ವೇಳೆಗೆ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ವಿವಿಐಪಿ ಭೇಟಿ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ, ಹೆಲಿಪ್ಯಾಡ್, ರಾಮಕೃಷ್ಣ ಆಶ್ರಮ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರವೇಶವನ್ನು ಹಲವು ಹಂತದ ಭದ್ರತಾ ತಪಾಸಣೆಗಳ ಮೂಲಕ ಮಾತ್ರ ಅನುಮತಿಸಲಾಗುತ್ತದೆ.

ಇದನ್ನೂ ಓದಿ: ತಮಿಳುನಾಡಿಗೆ 3.500 ಕ್ಯೂಸೆಕ್ ನೀರು ಬಿಡಲು ಆದೇಶ- ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ. ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸಿ, ಸಂಚಾರ ಸಂಬಂಧಿತ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವಿವೇಕ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಇದು ಈ ವರ್ಷ ಮೈಸೂರಿನಲ್ಲಿ ನಡೆಯುವ ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ.

ಶ್ರೀ ರಾಮಕೃಷ್ಣ ಪರಮಹಂಸರ ಪರಮಶಿಷ್ಯರಾದ ಸ್ವಾಮಿ ವಿವೇಕಾನಂದರು ಮೈಸೂರಿಗೆ ಆಗಮಿಸಿ ಎರಡು-ಮೂರು ವಾರ ಉಳಿದುಕೊಂಡು, ಉಪನ್ಯಾಸ ನೀಡಿ, ರಾಜರು, ದಿವಾನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಅವರು ಉಳಿದುಕೊಂಡ ಪವಿತ್ರ ತಾಣವೊಂದು ‘ವಿವೇಕ ಸ್ಮಾರಕ’ವಾಗಿ ಮೈದಳೆದು, ಲೋಕಾರ್ಪಣೆಗೆ ಸಜ್ಜಾಗಿದೆ.

 

Kishor KV

Leave a Reply

Your email address will not be published. Required fields are marked *