ರಾಜ್ಯದಲ್ಲಿ ಮಳೆರಾಯನ ರುದ್ರ ನರ್ತನ – ಮಡಿಕೇರಿಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಕರ್ನಾಟಕ ರಾಜ್ಯದಲ್ಲಿ ಮಳೆ ಬಿಟ್ಟು ಬಿಡದೆ ಸುರಿಯುತ್ತಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ಪ್ರವಾಹದ ಕಾರಣ ಸ್ನಾನಘಟ್ಟದಲ್ಲಿ ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಜಿಲ್ಲೆಯ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ತೊಡಕು ಉಂಟಾಗಿದೆ.
ಇದನ್ನೂ ಓದಿ: RO-KOಗೆ ಸಿಗುತ್ತಾ ವಿಶ್ವಕಪ್? – ಟ್ರೋಫಿ ಜೊತೆಯಲ್ಲಿ ಸೆಂಡ್ ಆಫ್ ಸಾಧ್ಯನಾ?
ಭಾರತ ಹವಾಮಾನ ಇಲಾಖೆ ಪ್ರಕಟಿಸಿರುವ ರಾಜ್ಯ ಮಟ್ಟದ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗಗಳಲ್ಲಿ ಕೆಲವೆಡೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇಂದಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಹೆಚ್ಚಾಗಿದೆ. ಈ ಭಾಗಗಳಲ್ಲಿ ಮಳೆ ವ್ಯಾಪಕವಾಗಿ ಸುರಿಯಲಿದ್ದು, ನದಿ, ಹಳ್ಳ-ಕೊಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದು ಹಾಗೂ ಮೀನುಗಾರರು ಸಮುದ್ರಕ್ಕೆ ತೆರಳುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ.

ನೋಡಿರಿ

